ವಿಜಯಪುರ: ಅತ್ಯಾಚಾರ ನಡೆಸುವವರ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಈ ಘಟನೆ ನೋವಿನ ಸಂಗತಿಯಾಗಿದೆ. ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಹಾಡಹಗಲೇ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡುತ್ತಾರೆಂದರೆ ಕಾನೂನು ಪರಿಸ್ಥಿತಿ ಯಾವ ರೀತಿ ಇದೆ ಎಂದು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲಿತ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯ ಸಂತ್ರಸ್ಥೆಯ ಮನೆಗೆ ಇಂದು ಭೇಟಿ ನೀಡಿದ್ದ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಿದ ಅವರು ಅಷ್ಟೇ ಅಲ್ಲದೇ ವೈಯಕ್ತಿಕವಾಗಿ 25,000 ರೂ. ಪರಿಹಾರ ಘೋಷಿಸಿದ್ದಾರೆ.

Leave a Reply