ವಿಜಯಪುರ: ಬಾಲಕಿ ಮೇಲಿನ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ದೊರಕಿದೆ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಾರ್ಯಕರ್ತರು ಯಾಕೆ ಈ ವಿಚಾರದಲ್ಲಿ ಮೌನವಹಿಸಿದ್ದಾರೆ ಎಂಬುದು ತಿಳಿದು ಬಂದಿದೆ.

ದಾನಮ್ಮಳ ಅತ್ಯಾಚಾರಿಗಳ‌ ಪೈಕಿ ಓರ್ವ ಆರೋಪಿ ಸಾಗರ್ ಸ್ಥಳೀಯ ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಂಡಿದ್ದು, ಪಾಲಿಕೆಯ ಬಿಜೆಪಿ ಸದಸ್ಯರೊಂದಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಎನ್ನಲಾಗಿದೆ.

ಈತ ಸಾಮೂಹಿಕ ಗಣೇಶ ಸ್ಥಾಪನೆ ವೇಳೆ ದೇಣಿಗೆ ಸಂಗ್ರಹಿಸುತ್ತಿದ್ದ. ಅಲ್ಲದೆ ವಿಜಯಪುರ ನಗರದಲ್ಲಿ ಸ್ವಚ್ಛ ಭಾರತ ಅಭಿಯಾನದ ಮುಂಚೂಣಿಯಲ್ಲಿದ್ದ. ಬಿಜೆಪಿ ಮುಖಂಡ ಪ್ರಕಾಶ್ ಕಡಕೋಳ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿತ್ತು..

‌‌ಬಿಜೆಪಿ ನಾಯಕನೊಂದಿಗೆ ಗುರುತಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ‌ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದಲ್ಲದೆ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ..

Leave a Reply