ಬೆಂಗಳೂರು: ಮಲ್ಲೇಶ್ವರಂ ಬಿಜೆಪಿ ಕಛೇರಿ ಮುಂದೆ ಮಹದಾಯಿ ನೀರಿನ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಯಡಿಯೂರಪ್ಪ ವಿರುದ್ಧ ರೈತರು ಧಿಕ್ಕಾರ ಕೂಗಿದ್ದಾರೆ ಎಂದು ವರದಿಯಾಗಿದೆ. ಕಳೆದ ನಾಲ್ಕು ದಿನದಿಂದ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿಲ್ಲ. ಈ ಹಿಂದೆ ಯಡಿಯೂರಪ್ಪನವರು ನೀರು ಕೊಡಿಸುವುದಾಗಿ ಭರವಸೆಯನ್ನು ನೀಡಿದ್ದರು. ಆದರೆ ಈಗ ಮಾತು ತಪ್ಪುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿಕೊಂಡಿದ್ದಾರೆ.
ಇದೇ ವೇಳೆಯಲ್ಲಿ ಕಸ್ತೂರಿ ಮತ್ತು ಫಕೀರವ್ವ ಎಂಬಿಬ್ಬರು ಮಹಿಳೆಯರು ಅಸ್ವಸ್ಥಗೊಂಡಿದ್ದಾರೆ. ಮತ್ತು ಮಹಿಳೆಯರು ಕಣ್ಣೀರು ಹಾಕುವ ಮೂಲಕ ಪ್ರತಿಭಟನೆಯ ಕಾವನ್ನು ಹೆಚ್ಚಿಸಿಕೊಂಡರು.