ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ 150 ಕ್ಕಿಂತ ಹೆಚ್ಚು ಸ್ಥಾನವನ್ನು ಪಡೆದು ಅಧಿಕಾರಕ್ಕೇರುವ ಕನಸು ಕಂಡಿದ್ದ ಬಿಜೆಪಿಯನ್ನು ಎನ್ ಡಿಎ ಮಿತ್ರ ಪಕ್ಷ ಶಿವಸೇನೆ ಟೀಕಿಸುತ್ತಿದೆ. ಆದರೆ ಇದೇ ಸಂದರ್ಭದಲ್ಲಿ ಶಿವಸೇನೆ ಕಣಕ್ಕಿಳಿಸಿದ್ದ ಎಲ್ಲಾ 42 ಅಭ್ಯರ್ಥಿಗಳು ಠೇವಣಿಯನ್ನೂ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
2007 ರಲ್ಲಿಯೂ ಗುಜರಾತ್ ನಲ್ಲಿ ಶಿವಸೇನೆಯಿಂದ ಸ್ಪರ್ಧಿಸಿದ್ದ 33 ಅಭ್ಯರ್ಥಿಗಳು ಸೋತಿದ್ದರು.

ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿ, ಒಟ್ಟಾರೆ ಚಲಾವಣೆಯಾದ ಮತಗಳ ಪೈಕಿ 6 ನೇ ಒಂದರಷ್ಟು ಮತಗಳನ್ನು ಪಡೆಯಲು ವಿಫಲರಾದರೆ ಆ ಅಭ್ಯರ್ಥಿಯು ನಾಮಪತ್ರ ಸಲ್ಲಿಸುವಾಗ ಪಾವತಿಸಿದ್ದ ಠೇವಣಿ ಹಣವನ್ನು ಕೆಳ ಕೊಳ್ಳುತ್ತಾರೆ. ಶಿವಸೇನೆಯ ಎಲ್ಲಾ ಅಭ್ಯರ್ಥಿಗಳು ಸೇರಿ ಒಟ್ಟು 33,893 ಮತಗಳನ್ನು ಪಡೆದಿದ್ದಾರೆ.

Leave a Reply