ನವದೆಹಲಿ : ನಗರದಲ್ಲಿ 11,000 ಉಚಿತ ವೈ-ಫೈ ಹಾಟ್‌ಸ್ಪಾಟ್‌ಗಳನ್ನು ಸ್ಥಾಪಿಸಲು ದೆಹಲಿ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದು ಸ್ಮಾರ್ಟ್‌ಫೋನ್ ಮತ್ತು ಕಂಪ್ಯೂಟರ್ ಬಳಕೆದಾರರಿಗೆ ಪ್ರತಿ ತಿಂಗಳು 15 ಜಿಬಿ ಇಂಟರ್ನೆಟ್ ಡೇಟಾವನ್ನು ಗರಿಷ್ಠ 200 ಎಮ್‌ಬಿಪಿಎಸ್ ವೇಗದಲ್ಲಿ ಬಳಸಲು ಅನುವು ಮಾಡಿಕೊಡುತ್ತದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಉಚಿತ ವೈ-ಫೈ ಸೌಲಭ್ಯ ಒದಗಿಸುವುದಾಗಿ 2015 ರಲ್ಲಿ ಆಮ್ ಆದ್ಮಿ ಪಕ್ಷದ ಮತದಾನದ ಭರವಸೆಗಳಲ್ಲಿ ಒಂದಾಗಿತ್ತು. ಆ ಚುನಾವಣೆಯಲ್ಲಿ ಪಕ್ಷವು 70 ಸ್ಥಾನಗಳ ಪೈಕಿ 67 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿತು. ಆದರೆ ಅನೇಕ ಪ್ರಯತ್ನಗಳ ಹೊರತಾಗಿಯೂ ನಾಲ್ಕು ವರ್ಷಗಳಲ್ಲಿ ಈ ಪ್ರಮುಖ ಯೋಜನೆ ಕೈಗೊಳ್ಳಲು ಸಾಧ್ಯವಾಗಲಿಲ್ಲ.

ಮುಂದಿನ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು ತಯಾರಿ ನಡೆಸುತ್ತಿದ್ದು, 2020 ರ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದುದರಿಂದ, ಈ ವರ್ಷದ ಆರಂಭದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.

ಕಳೆದ ವರ್ಷ ರಾಜ್ಯದ ಬಜೆಟ್‌ನಲ್ಲಿ 100 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದ ಈ ಯೋಜನೆ ನಾಲ್ಕು ತಿಂಗಳಲ್ಲಿ ಪ್ರಾರಂಭವಾಗಲಿದೆ. ಈ ಯೋಜನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here