ಬೆಂಗಳೂರು : ರಾಜ್ಯ ಸರ್ಕಾರವು ೮೬ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ.
ಮಳೆ ಕೊರತೆಯಿಂದ 15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಒಣಗಿ ಹೋಗಿದ್ದು, ಸುಮಾರು ಎಂಟು ಸಾವಿರ ಕೋಟಿ ರೂ. ನಷ್ಟ ಆಗಿರಬಹುದು ಎಂದು ಅಂದಾಜಿಸಲಾಗಿದೆ ಎಂದು ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬರ ಪೀಡಿತ ತಾಲೂಕುಗಳಲ್ಲಿ ತಕ್ಷಣ ಕುಡಿಯುವ ನೀರಿನ ವ್ಯವಸ್ಥೆಗಾಗಿ ಜಿಲ್ಲಾಧಿಕಾರಿಗಳಿಗೆ ತಲಾ 50 ಲಕ್ಷ ರೂ. ಗಳಂತೆ ಒಟ್ಟು 43 ಕೋ.ರೂ ಬಿಡುಗಡೆ ಮಾಡಲಾಗಿದ್ದು, ಕೃಷಿ,ಕಂದಾಯ ಹಾಗೂ ತೋಟಗಾರಿಕಾ ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಿ ನಷ್ಟದ ಸಮಗ್ರ ಪರಿಶೀಲನೆ ನಡೆಸಿದ ಬಳಿಕ ಪರಿಹಾರಕ್ಕಾಗಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಜಲ ಪ್ರಳಯದಿಂದ ಸುಮಾರು 3705 ಕೋ.ರೂ ನಷ್ಟ ಸಂಭವಿಸಿದ್ದು ಪರಿಹಾರ ನೀಡುವಂತೆ ಪ್ರಧಾನಿಗಳಿಗೆ ಮನವಿ ಸಲ್ಲಿಸಲಾಗಿದೆ. ಶೀಘ್ರವೇ ಪರಿಹಾರ ಸಿಗಬಹುದೆಂಬ ನಿರೀಕ್ಷೆ ಇದೆ ಎಂದು ಅವರು ಅಭಿಪ್ರಾಯ ಪಟ್ಟರು.

Leave a Reply