ಬೆಂಗಳೂರು:ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಹಾಗು ಕನ್ನಡ ನಾಡಿನ ಸಾಕ್ಷಿ ಪಜ್ಞೆಯಾಗಿದ್ದ ಎ.ಕೆ ಸುಬ್ಬಯ್ಯ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಎ.ಕೆ ಸುಬ್ಬಯ್ಯ ಅವರು ಕಳೆದ ಒಂದು ವರ್ಷದಿಂದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರು ವಾರಕ್ಕೆ ಮೂರು ದಿನ ಡಯಾಲಿಸಿಸ್ ಗೆ ಒಳಗಾಗುತ್ತಿದ್ದರು.ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಎ.ಕೆ.ಸುಬ್ಬಯ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ಬಿಗಡಾಯಿಸಿತ್ತು. ನಿನ್ನೆ ಬೆಳಗ್ಗೆಯಿಂದ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ 85ವರ್ಷ ವಯಸಾಗಿತ್ತು.

ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾಜ್ಯದ ಉಚ್ಚನ್ಯಾಯಾಲಯದಲ್ಲಿ ಅವರು ವಕೀಲರಾಗಿ ಪ್ರಸಿದ್ದಿ ಪಡೆದುಕೊಂಡಿದ್ದರು. ಮರ್ದಿತರ ಧ್ವನಿಯಾಗಿ ಹೋರಾಟ ನಡೆಸತ್ತಿದ್ದರು. ಕನ್ನಡ ನಾಡಿನ ಕೋಮು ಸಾಮರಸ್ಯದ ಬಗ್ಗೆ ಅವರು ಅಪಾರ ಕಾಳಜಿ ವಹಿಸುತ್ತಿದ್ದರು.

LEAVE A REPLY

Please enter your comment!
Please enter your name here