ಜೋಧ್‌ಪುರ: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಮಧ್ಯೆ ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಮ್ಮ ನಿಲುವನ್ನು ಮತ್ತೊಮ್ಮೆ ಖಡಕ್ ಆಗಿ ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ವಿರುದ್ಧ ಎಲ್ಲಾ ಪಕ್ಷಗಳು ಒಗ್ಗೂಡಿ, ಎಷ್ಟೇ ತಪ್ಪು ಮಾಹಿತಿಯನ್ನು ಹರಡಿದರೂ ಬಿಜೆಪಿ ಒಂದು ಇಂಚು ಹಿಂದೆ ಸರಿಯುವುದಿಲ್ಲ ಎಂದು ಶಾ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಹೇಳಿದರು.

ಪೌರತ್ವ ಕಾಯ್ದೆಯ ಬಗ್ಗೆ ಬಿಜೆಪಿ  ದೇಶದಾದ್ಯಂತ ಜಾಗೃತಿ ಅಭಿಯಾನವನ್ನು ಕೈಗೊಳ್ಳುತ್ತಿದೆ. ಕಾಂಗ್ರೆಸ್ ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಆದ್ದರಿಂದ ಈ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದರು. ರಾಹುಲ್ ಬಾಬಾ ಈ ಕಾಯ್ದೆಯ ಬಗ್ಗೆ ಓದಿದ್ದರೆ ನಮ್ಮಲ್ಲಿ ಚರ್ಚೆಗೆ ಬನ್ನಿ. ನೀವು ಅದನ್ನು ಓದಿಲ್ಲವಾದರೆ ಅದನ್ನು ನಾವು ಇಟೆಲಿ ಭಾಷೆಗೆ ಅನುವಾದಿಸುತ್ತೇವೆ. ಆಗ ನೀವು ಅದನ್ನು ಓದಬಹುದು ಎಂದು ಹೇಳಿದರು.

LEAVE A REPLY

Please enter your comment!
Please enter your name here