ಲಕ್ನೊ: ಅಲಾಹಾಬಾದ್ ಜಿಲ್ಲೆಗೆ ಪ್ರಯಾಗ್‍ರಾಜ್ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. 2019 ಜನವರಿಯಿಂದ ಮಾರ್ಚ್ ವರೆಗೆ ಕುಂಭ ಮೇಳ ನಡೆಯಲಿದ್ದು, ಈ ಸಂದರ್ಭದಲ್ಲಿ ಅಲಾಹಾಬಾದಿನ ಹೆಸರನ್ನು ಬದಲಾಯಿಸಲು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ.

ಕುಂಭಮೇಳದ ಸಿದ್ಧತೆಗಳು ಪೂರ್ತಿಯಾಗುವುದರೊಂದಿಗೆ ಅಲಾಹಾಬಾದ್‍ನ ಹೆಸರು ಬದಲಾಯಿಸುವ ಉದ್ದೇಶ ಇರಿಸಿಕೊಳ್ಳಲಾಗಿದೆ ಎಂದು ಯೋಗಿ ಮಾಧ್ಯಮಗಳಿಗೆ ತಿಳಿಸಿದರು. ರಾಜ್ಯಪಾಲ ರಾಮ್ ನಾಯಿಕ್ ಹೆಸರು ಬದಲಾಯಿಸಲು ಅನುಮತಿ ನೀಡಿದ್ದಾರೆ ಎಂದು ಯೋಗಿ ಹೇಳಿದರು.

ಮುಂದಿನ ಸಚಿವ ಸಂಪುಟದಲ್ಲಿ ಈ ಕುರಿತು ಮಸೂದೆ ಜಾರಿಗೊಳಿಸಲಾಗುವುದು ಎಂದು ಯೋಗಿ ಹೇಳಿದರು. ಆಲಾಹಾಬಾದ್ ಕುಂಭಮೇಳದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದರು.

Leave a Reply