Prime Minister Narendra Modi and BJP senior leader LK Advani during BJP National Executive Meeting, in New Delhi, Saturday, Sept 8, 2018. Express Photo By Amit Mehra

ನವದೆಹಲಿ : ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮುಂದಿಟ್ಟು ಪ್ರತಿಪಕ್ಷಗಳು ಬಿಜೆಪಿ ಸರಕಾರವನ್ನು ತೀವ್ರವಾಗಿ ಟೀಕಿಸುತ್ತಿದ್ದು, ಈ ಟೀಕೆಗೆ ಪ್ರತ್ಯುತ್ತರ ನೀಡಲು ಬಿಜೆಪಿ ಸಜ್ಜಾಗುತ್ತಿದೆ. ಮಾತ್ರವಲ್ಲ , ಮುಂಬರುವ ಲೋಕ ಸಭಾ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನ ಸಭಾ ಚುನಾವಣೆಗಳಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹೊಸ ರಣತಂತ್ರ ರೂಪಿಸಲು ಕೂಡ ಗಂಭೀರ ಚಿಂತನೆ ನಡೆಸಿದೆ.

ಶನಿವಾರ ಪ್ರಾರಂಭವಾಗಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯ ಎರಡು ದಿನಗಳ ಅಧಿವೇಶನದಲ್ಲಿ ಅಮಿತ್ ಶಾರನ್ನೇ ಲೋಕ ಸಭೆ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷರಾಗಿ ಮುಂದುವರಿಸುವ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ ಎಂದು ರಾಷ್ಟೀಯ ಮಾಧ್ಯಮಗಳು ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭಾರತ ನಿರ್ಮಾಣಕ್ಕಾಗಿ ಕೆಲಸ ಮಾಡಿದರೆ, ಕಾಂಗ್ರೆಸ್ ಭಾರತ ಮುರಿಯುವುದಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ಆರೋಪಿಸಿದ್ದಾರೆ.

ಇಂದು ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 2014ಕ್ಕಿಂತಲೂ ದೊಡ್ಡ ಮಟ್ಟದ ಗೆಲವು ಸಾಧಿಸಲಿದೆ ಎಂದರು.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 543 ಸ್ಖಾನಗಳ ಪೈಕಿ 282 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಅಧಿಕಾರಕ್ಕೆ ಬಂದ ನಂತರ ನರೇಂದ್ರ ಮೋದಿ ಸರ್ಕಾರ ದೇಶದ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡಿದೆ. ಹೀಗಾಗಿ ಬಿಜೆಪಿ ಮುಂದಿನ ಲೋಕಸಭೆಯಲ್ಲಿ ಇನ್ನೂ ದೊಡ್ಡ ಮಟ್ಟದ ಗೆಲುವು ಸಾಧಿಸಲಿದೆ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ವಿರುದ್ಧ ಒಂದಾಗುತ್ತಿರುವ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, ಮಹಾಘಟಬಂಧನ್ ಜನರ ಕಣ್ಣೋರೆಸುವ ತಂತ್ರ ಮತ್ತು ಅದೊಂದು ಭ್ರಮೆ ಅಷ್ಟೆ ಎಂದರು.
ಪ್ರತಿಪಕ್ಷಗಳು ಜನರನ್ನು ಗೊಂದಲಕ್ಕೆ ದೂಡುವ ಪ್ರಯತ್ನ ಮಾಡುತ್ತಿದ್ದು, ಇದರಲ್ಲಿ ಅವರು ಯಾವುದೇ ಕಾರಣಕ್ಕೂ ಯಶಸ್ವಿಯಾಗಲು ಸಾಧ್ಯವಿಲ್ಲ. ಆದರೆ ನಾವು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಧನೆಗಳನ್ನು ಜನರಿಗೆ ತಲುಪಿಸುವುದು ಮುಖ್ಯವಾಗಿದೆ. ಈ ವಿಚಾರಗಳ ಮೂಲಕ ಚುನಾವಣೆಗೆ ಸಿದ್ಧರಾಗಬೇಕಾಗಿದೆ ಎಂದು ಶಾ ಹೇಳಿದ್ದಾರೆ.

Leave a Reply