ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ. ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ
ಇಂದು ಹೊಳಲ್ಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಅಮಿತ್ ಶಾ, ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ನೆರವು ನೀಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಆದರೆ ಅವರಿಗೆ ಲೆಕ್ಕ ಕೊಡಲು ನಾನು ಇಲ್ಲಿಗೆ ಬಂದಿದ್ದೇನೆ. ಕರ್ನಾಟಕದ ವಿವಿಧ ಯೋಜನೆಗಳಿಗಾಗಿ ಕೇಂದ್ರ ಸರ್ಕಾರ ಒಟ್ಟು 3 ಲಕ್ಷ ಕೋಟಿ ರುಪಾಯಿ ನೀಡಿದೆ. ಆದರೆ ಈ ಹಣ ಎಲ್ಲಿ ಹೋಯ್ತು? ಕೇಂದ್ರ ಸರ್ಕಾರ ನೀಡಿದ ಹಣಕಾಸಿನ ನೆರವು ಎಷ್ಟು ಹಣ ಹಳ್ಳಿಗಳಿಗೆ ತಲುಪಿದೆ ಹೇಳಿ? ಎಲ್ಲವನ್ನೂ ಕಾಂಗ್ರೆಸ್ ನುಂಗಿ ನೀರು ಕುಡಿದಿದೆ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಉಜ್ವಲ ಗ್ಯಾಸ್ ಯೋಜನೆ, ಮುದ್ರಾ ಯೋಜನೆ, ಸ್ವಚ್ಛ ಭಾರತ ಅಭಿಯಾನ ಮೊದಲಾದ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೊಟ್ಟ ಹಣದ ಬಹುಪಾಲನ್ನು ಕಾಂಗ್ರೆಸಿಗರು ನುಂಗಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 14ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 2,19, 506 ಕೋಟಿ ರುಪಾಯಿ ಕೊಟ್ಟಿದ್ದಾರೆ. 13ನೇ ಹಣಕಾಸು ಆಯೋಗದಲ್ಲಿ ಈ ಮೊತ್ತ ಬರೀ 88,583 ರುಪಾಯಿ ಇತ್ತು ಎಂದು ಅಮಿತ್ ಶಾ ಹೇಳಿದರು.

Leave a Reply