ದೇಶದಾದ್ಯಂತ ರಾಜಕೀಯವಾಗಿ ಬಹಳಷ್ಟು ಸೂಕ್ಷ್ಮ ವಿಷಯವಾಗಿರುವ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟಿನ ತೀರ್ಪಿನ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಲ್ಲಾ ತರದ ವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್ನ ಐವರು ನ್ಯಾಯಾಧೀಶರ ತೀರ್ಪನ್ನು ತಾವು ಸ್ವಾಗತಿಸುವುದಾಗಿ ಹೇಳಿದ್ದಾರೆ.

ಹಲವಾರು ಹಲವಾರು ದಶಕಗಳ ವಿವಾದದ ಬಗ್ಗೆ ಇಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ವರ್ಷಗಳ ಹಳೆಯ ವಿವಾದವೊಂದು ಇದರಿಂದ ಕೊನೆಗೊಂಡಿದೆ. ಮಾತ್ರವಲ್ಲ ಎಲ್ಲಾ ಜನರು ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಶನಿವಾರ ದಾರಿ ಮಾಡಿಕೊಟ್ಟಿದ್ದು, ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ಜಮೀನನ್ನು ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

LEAVE A REPLY

Please enter your comment!
Please enter your name here