ಶ್ರೀನಗರ : ಮಧ್ಯಕಾಶ್ಮೀರದ ಬಡಗಾಂವ್ ಜಿಲ್ಲೆಯಲ್ಲಿ ಬಾಲಕಿಯೊಬ್ಬಳ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಮಹಿಳೆಯೇ ಸಹಕರಿಸಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು, ಕೃತ್ಯಕ್ಕೆ ಸಹಕರಿಸಿದ್ದ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ಕುಟುಂಬ ಸಲ್ಲಿಸಿದ್ದ ದೂರಿನ ಮೇಲೆ ಸಂಬಾಲ್ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮೊದಲು ಮೂವರನ್ನು ಬಂಧಿಸಿದ್ದಾರೆ. ಬಾಲಕಿಯ ಮೇಲೆ ಮೊದಲು ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು ಅದನ್ನು ಇತರ ಇಬ್ಬರು ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯ ಎಸಗಲು ಸಹಕರಿಸಿದ ಆರೋಪದ ಮೇಲೆ ಓರ್ವ ಮಹಿಳೆಯನ್ನೂ ಬಂಧಿಸಿದ್ದಾರೆ.
