ಅಗರ್ತಲ:‌ ಭಾರೀ ಕುತೂಹಲ ಹಾಗೂ ಪೈಪೋಟಿಯ ಬಳಿಕ ಬಿಜೆಪಿ ಮಿತ್ರಪಕ್ಷಗಳು ಮುನ್ನಡೆಯನ್ನು ಕಾಯ್ದುಕೊಂಡಿದೆ. ಈಶಾನ್ಯದ ಮೂರು ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು ಸದ್ಯದ ವರದಿಗಳ ಪ್ರಕಾರ ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮಿತ್ರಪಕ್ಷಗಳು ಭಾರಿ ಮುನ್ನಡೆ ಕಾಯ್ದುಕೊಂಡಿವೆ.

ಕಳೆದ 25 ವರ್ಷಗಳಿಂದ ತ್ರಿಪುರದಲ್ಲಿ ಆಡಳಿತ ನಡೆಸುತ್ತಾ ಬಂದ ಸಿಪಿಐಎಂ ಆಡಳಿತಕ್ಕೆ ಇಂದು ಹೊಡೆತ ಬೀಳುವ ಎಲ್ಲ ಸಾಧ್ಯತೆಗಳು ಇವೆ. ಈಗಾಗಲೇ ಭಾರಿ ಮುನ್ನಡೆ ಸಾಧಿಸಿರುವ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

ಮತ್ತು ಮೇಘಾಲಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಧೃಡವಾಗಿದೆ. ಕಾಂಗ್ರೆಸ್ 27 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಎನ್‌ಪಿಪಿ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷೇತರ ಅಭ್ಯರ್ಥಿಗಳು 8 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ

ಇತ್ತೀಚಿನ ವರದಿಗಳ ಪ್ರಕಾರ, ಬಿಜೆಪಿ ಮೈತ್ರಿಕೂಟ 31 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಪೈಕಿ, ಎನ್‌ಡಿಪಿಪಿ 20 ಸ್ಥಾನ ಹಾಗೂ ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಎನ್‌ಪಿಎಫ್‌ 22 ಸ್ಥಾನ ಹಾಗೂ ಕಾಂಗ್ರೆಸ್‌ 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ.‌‌ ಇನ್ನೂ ತ್ರಿಪುರದಲ್ಲಿ ಸದ್ಯದ ಮಾಹಿತಿ ಪ್ರಕಾರ, ಬಿಜೆಪಿ ಮಿತ್ರಪಕ್ಷಗಳು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಸಿಪಿಐಎಂ ಮಿತ್ರಪಕ್ಷಗಳು 18 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಕಾಂಗ್ರೆಸ್ ಖಾತೆ ತೆರೆದಿಲ್ಲ.

Leave a Reply