ನವದೆಹಲಿ: ಕೇರಳಕ್ಕೂ ದೂರದ ಯುಎಇ ಸಂಬಂಧ ಬಹಳಷ್ಟು ನಂಟಿದೆ.ಶತಮಾನದ ಮಹಾ ಪ್ರವಾಹಕ್ಕೆ ತುತ್ತಾಗಿರುವ ಕೇರಳ ರಾಜ್ಯಕ್ಕೆ ಯುಎಇ 700 ಕೋಟಿ ರು ಗಳ ಹಣಕಾಸಿನ ನೆರವು ನೀಡುವುದಾಗಿ ಹೇಳಿದೆ ಎಂದು ಸ್ವತಃ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಇದರಿಂದಾಗಿ ಕೇಂದ್ರ ಸರಕಾರ ಘೋಷಿಸಿರುವ ಹಣಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಯುಎಇ ಕೇರಳಕ್ಕೆ ನೀಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಮಧ್ಯಂತರ ಪರಿಹಾರವಾಗಿ 500 ಕೋಟಿ ರು. ಹಣ ನೀಡುವುದಾಗಿ ಘೋಷಿಸಿದ್ದರು, ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಹಣ ಯಾವುದಕ್ಕೂ ಸಾಕಾಗುವುದಿಲ್ಲ, ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವುದರಿಂದ ಮತ್ತಷ್ಟು ಹೆಚ್ಚಿನ ಪರಿಹಾರ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದರು.

Leave a Reply