ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಈಗಾಗಲೇ ಪರಸ್ಪರ ವಾಗ್ದಾಳಿ ನಡೆಸಲು ಪ್ರಾರಂಭಿಸಿದ್ದಾರೆ. ಹಿಂದೆಲ್ಲಾ ಟಿವಿ ದಿನಪತ್ರಿಕೆಗಳಿಗೆ ಕಾಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ಟ್ವೀಟ್ ಸಮರ ಶುರುವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಡಿಯೂರಪ್ಪರಿಗೆ ಟಾರ್ಗೆಟ್ ಮಾಡಿ,

“ಕೆಜೆಪಿಯಲ್ಲಿದ್ದಾಗ ‘ಜೈ ಟಿಪ್ಪು’
ಬಿಜೆಪಿಗೆ ಮರಳಿದಾಗ ‘ಜೈ ಶ್ರೀರಾಮ್’
ಮುಂದೆ ಯಾರಿಗೆ ಜೈ?” ಎಂದು ಟ್ವೀಟ್ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್ ರವರು ಬೆಂಗಳೂರಿಗೆ ಬಂದಿದ್ದೇ ತಡ, ಹಿಂದೂ ದ್ವೇಷ ಕಾರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧಾರ್ಮಿಕತೆಯ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಇನ್ನೆರಡು ಬಾರಿ ಯೋಗಿ ಕರ್ನಾಟಕಕ್ಕೆ ಬಂದರೆ ಸಿದ್ದರಾಮಯ್ಯ ಅವರು ನವರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದರೂ ಆಶ್ಚರ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಈ ಹಿಂದೆ ಟ್ವೀಟ್ ಮಾಡಿದ್ದರು.

Leave a Reply