Image : Indiatimes

ಶಮ್ಲಿ: ಉತ್ತರ ಪ್ರದೇಶದ ಶಮ್ಲಿಯಲ್ಲಿ ರೈಲು ಹಳಿ ತಪ್ಪಿದ್ದನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಇಲ್ಲಿನ ರೈಲ್ವೆ ಪೊಲೀಸರು ಹಲ್ಲೆ ನಡೆಸಿದ್ದು ಅಲ್ಲದೇ, ಆತನ ಬಾಯಿಗೆ ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ರೈಲ್ವೆ ಪೊಲೀಸರು ಟಿವಿ ವರದಿಗಾರ ಅಮಿತ್ ಶರ್ಮಾ ಅವರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಹೀನ ಕೃತ್ಯಕ್ಕೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಬಳಿಕ ಈ ವಿಡಿಯೋ ಉತ್ತರ ಪ್ರದೇಶ ಡಿಜಿಪಿ ಒಪಿ ಸಿಂಗ್ ರವರ ಗಮನಕ್ಕೆ ಬಂದಿದ್ದು, ಅವರು ಕೂಡಲೇ ಪೊಲೀಸರಾದ ರಾಕೇಶ್ ಕುಮಾರ್ ಮತ್ತು ಸಂಜಯ್ ಪವಾರ್ ರನ್ನು ಅಮಾನತ್ತು ಗೊಳಿಸಿದ್ದಾರೆ. ನಾಗರಿಕರ ಜೊತೆ ಅನುಚಿತವಾಗಿ ವರ್ತಿಸಿದ ಪೋಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸ್ ಟ್ವೀಟ್ ಮಾಡಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತ ಟ್ವಿಟರ್ ಬರವಣಿಗೆಗೆ ಜೈಲು ಪಾಲಾಗಿದ್ದ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಮರುದಿನವೇ, ಮತ್ತೋರ್ವ ಪತ್ರಕರ್ತನ ಮೇಲೆ ರೈಲ್ವೆ ಪೊಲೀಸರೆ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ಪತ್ರಕರ್ತರ ಪರಿಸ್ಥಿತಿಯನ್ನು ವಿವರಿಸುತ್ತಿದೆ.

Leave a Reply