ನವದೆಹಲಿ:ಖೇಲ್ ರತ್ನ ಪ್ರಶಸ್ತಿ ಪುರಸ್ಕೃತೆ, ಪ್ಯಾರಾಲಿಂಪಿಯನ್ ಪಟು ದೀಪಾ ಮಲಿಕ್, ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ಸೋಮವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತ ಪ್ಯಾರಾಲಿಂಪಿಕ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಹಿನ್ನೆಲೆಯಲ್ಲಿ ಅವರು ಕ್ರೀಡಾ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ನಿಯಮಾವಳಿ ಪ್ರಕಾರ ಭಾರತ ಪ್ಯಾರಾಲಿಂಪಿಕ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುವವರು ಯಾವುದೇ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು. ಈ ಹಿನ್ನೆಲೆಯಲ್ಲಿ ದೀಪಾ ಕ್ರೀಡಾ ಚಟುವಟಿಕೆಗಳಿಗೆ ವಿದಾಯ ಹೇಳಿದ್ದಾರೆ. ರಾಷ್ಟ್ರದಲ್ಲಿನ ವಿಕಲಾಂಗ ಕ್ರೀಡಾಪಟುಗಳಿಗೆ ನೆರವು ನೀಡುವ ನಿಟ್ಟಿನಲ್ಲಿ ನಾನು, ಭಾರತ ಪ್ಯಾರಾಲಿಂಪಿಕ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಇರುವ ನಿಯಮಗಳ ಪ್ರಕಾರ ಕ್ರೀಡಾ ಚಟುವಟಿಕೆಗಳಿಂದ ದೂರ ಉಳಿಯಲು ತೀರ್ಮಾನಿಸಿದೆ ಎಂದು ದೀಪಾ ಮಲಿಕ್ ತಿಳಿಸಿದ್ದಾರೆ.
ಚುನಾವಣೆಯ ಹಿನ್ನೆಲೆಯಲ್ಲಿ ನಾನು ಈಗಾಗಲೇ ಪಿಸಿಐಗೆ ಈ ಹಿಂದೆಯೇ ಅಂದರೆ 2019 ರ ಸೆಪ್ಟೆಂಬರ್ ತಿಂಗಳಲ್ಲಿ ಪತ್ರವೊಂದನ್ನು ಬರೆದಿರುವೆ. ಈಗ ಕೇಂದ್ರ ಯುವಜನ ವ್ಯವಹಾರ ಹಾಗೂ ಕ್ರೀಡಾ ಇಲಾಖೆಗೆ ಪತ್ರವೊಂದನ್ನು ಬರೆದಿರುವೆ ಎಂದು ಅವರು ವಿವರಿಸಿದರು.

ಭಾರತ ಪ್ಯಾರಾಲಿಂಪಿಕ್ ಸಮಿತಿಯ ಚುನಾವಣೆ ನ್ಯಾಯಲಯದ ಮೆಟ್ಟಿಲು ಏರಿತ್ತು. ಪ್ರಕರಣದ ವಿಚಾರಣೆ ಪೂರ್ಣಗೊಂಡು ಫಲಿತಾಂಶ ಕೂಡ ಹೊರಬಿದ್ದಿದೆ. ತೀರ್ಪು ಕೂಡ ಪಿಸಿಐ ಪರವಾಗಿ ಬಂದಿದೆ ಎಂದು ದೀಪಾ ತಿಳಿಸಿದರು. ವಿಕಲಚೇತನ ಕ್ರೀಡಾಪಟುಗಳಿಗೆ ನೆರವು ನೀಡುವ ನಿಟ್ಟಿನಲ್ಲಿ ನಾನು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಹಂತಹಂತವಾಗಿ ಜಾರಿಗೆ ತರುವ ಮೂಲಕ ಕೀಡಾಪಟುಗಳಿಗೆ ನೆರವಾಗುವೆ ಎಂದು ಪ್ರಾರಾಲಿಂಪಿಯನ್ ಪಟು ದೀಪಾ ಮಲಿಕ್ ಭರವಸೆ ನೀಡಿದ್ದಾರೆ.

Leave a Reply