ಭದ್ರತೆ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದು ಬೇಡ, ಹುಸಿ ಕರೆಗಳು ಎಂದು ಉದಾಸೀನತೆ ಮಾಡದೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. – ನಗರದ ವ್ಯಕ್ತಿಯೊಬ್ಬ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಉಗ್ರಗಾಮಿಗಳು ದೇಶದೊಳಗೆ ನುಸುಳಿದ್ದಾರೆ ಎಂಬ ಮಾಹಿತಿ ನೀಡಿರುವುದರಲ್ಲಿ ಸತ್ಯಾಂಶವಿಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿ, ನಿಯಂತ್ರಣ ಕೊಠಡಿಗೆ ಬಂದಂತಹ ಕರೆಯನ್ನು ಪರಿಶೀಲಿಸಲಾಗಿದ್ದು, ಅದು ಹುಸಿ ಕರೆ ಎಂಬುದು ದೃಢ ಪಟ್ಟಿದೆ.

ಆ ವ್ಯಕ್ತಿ ಈ ಹಿಂದೆಯೂ ಇಂಥದ್ದೇ ಕರೆಯನ್ನು ಮಾಡಿದ್ದ ಎಂದು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ಕರೆ ಹುಸಿಯಾಗಿದ್ದರೂ ನಿರ್ಲಕ್ಷ್ಯ ಮಾಡದೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply