ಸಾಧ್ವಿ ಪಾಕಿಸ್ತಾನದ ಮಸೂದ್ ಗೆ ಶಾಪ ಹಾಕಿರುತ್ತಿದ್ದರೆ ಸರ್ಜಿಕಲ್ ಸ್ಟ್ರೈಕ್ ಮಾಡುವ ಅಗತ್ಯ ಬರುತ್ತಿರಲಿಲ್ಲ ಎಂದು ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಶನಿವಾರ ಮಾತನಾಡುತ್ತಾ,  ದೇಶಕ್ಕಾಗಿ ತನ್ನ ಜೀವವನ್ನು ತ್ಯಾಗವನ್ನು ಮಾಡಿದ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ತನ್ನ ಶಾಪದಿಂದ ಸತ್ತಿದ್ದಾರೆ ಎಂದು ಸಾಧ್ವಿ ಹೇಳುತ್ತಾರೆ. ನಿಜವಾಗಿ ಕರ್ಕರೆಯವರನ್ನು ಹುತಾತ್ಮ ಎಂದು ಪರಿಗಣಿಸಲಾಗಿದೆಒಂದು ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಪಾಕಿಸ್ತಾನದ ಜೈಶೆ ಮೊಹಮ್ಮದ್ ನಾಯಕ ಮಸೂದ್ ಅಜರ್ ನಿಗೆ ಶಾಪ ಹಾಕಿರುತ್ತಿದ್ದರೆ, ಭಾರತಕ್ಕೆ ಸರ್ಜಿಕಲ್ ಸ್ಟ್ರೈಕ್ ಮಾಡುವ ಅಗತ್ಯ ಬೀಳುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ ಎಂದು ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

Leave a Reply