ಚಿಕ್ಕೋಡಿ: ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ತಾಲೂಕಿನ ಹಿರೇಕೊಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಭವಿಸಿದೆ.
ಶಾಲೆಯ ನಾಲ್ಕನೇ ತರಗತಿ ನಡೆಯುತ್ತಿದ್ದ ಕೊಠಡಿಯಲ್ಲಿ ನಡೆದ ಈ ಘಟನೆಯಲ್ಲಿ ಸುಪ್ರೀತಾ ಸುರೇಶ ದ್ರಾಕ್ಷೆ, ಶ್ರಾವಣಿ ದೊಡಮನಿ ಎಂಬ ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ತರಗತಿಯಲ್ಲಿ ಇದ್ದ ಇನ್ನುಳಿದ ಮಕ್ಕಳಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಸಾ

ರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರಕಾರಿ ಶಾಲಾ ಕಟ್ಟಡಗಳ ಬಗ್ಗೆ ಸರಕಾರ ವಿಶೇಷ ಕಾಳಜಿ ವಹಿಸಬೇಕಾಗಿದ್ದು, ಸರಕಾರಿ ಶಾಲೆಯ ಗುಣಮಟ್ಟದ ಜೊತೆಗೆ ಇನ್ಫ್ರಾಸ್ಟ್ರಕ್ಚರ್ ಅಭಿವೃದ್ಧಿಯ ಬಗ್ಗೆಯೂ ವಿಶೇಷ ಗಮನ ಹರಿಸಬೇಕಾಗಿದೆ.