image credit : Flickr

ಡೆಂಗಿ ಜ್ವರ ಎಂದರೇನು? ಡೆಂಗಿ ಅಥವಾ ಡೆಂಗ್ಯೂ ಜ್ವರ ವೈರಸ್‌ನಿಂದ ಉಂಟಾಗುವ ಖಾಯಿಲೆ. ಇದು ಸೋಂಕು ಹೊಂದಿದ ಈಡಿಸ್ ಇಜಿಪ್ಪೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತದೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ.

ರೋಗ ಲಕ್ಷಣಗಳು: * ಇದ್ದಕ್ಕಿದ್ದಂತೆ ತೀವ್ರ ಜ್ವರ,   ಮೈ-ಕೈ ನೋವು ಮತ್ತು ಕೀಲು ನೋವು, ತೀವ್ರ ತಲೆನೋವು ಹೆಚ್ಚಾಗಿ ಹಣೆ ಮುಂಭಾಗ, ಕಣ್ಣಿನ ಹಿಂಭಾಗದ ನೋವು.  ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಗುರುತುಗಳು.  ತೀವ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ವಾಕರಿಕೆ ಮತ್ತು ವಾಂತಿ.

ಮುಂಜಾಗ್ರತಾ ಕ್ರಮಗಳು: ನೀರಿನ ತೊಟ್ಟಿಗಳು, ಡ್ರಂ, ಬ್ಯಾರಲ್ ಮತ್ತು ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿ ಮನೆಯ ಮೇಲೆ ಮತ್ತು ಸುತ್ತಮುತ್ತಲಿನ ಮಳೆಯ ನೀರು ಸಂಗ್ರಹವಾಗುವಂತಹ ಪ್ಲಾಸ್ಟಿಕ್ ವಸ್ತುಗಳು, ಟೈರ್‌ಗಳು, ಒಡೆದ ತೆಂಗಿನ ಚಿಪ್ಪು ಇತ್ಯಾದಿಗಳನ್ನು ತಕ್ಷಣ ವಿಲೆವಾರಿ ಮಾಡಿ. ಏರ್‌ಕೂಲರ್, ಹೂವಿನಕುಂಡ, ಫೈರ್ ಬಕೆಟ್, ಇತ್ಯಾದಿಗಳ ನೀರನ್ನು ಪ್ರತಿ ವಾರ ಖಾಲಿ ಮಾಡಿ, ಒಣಗಿಸಿ ಮತ್ತೆ ಭರ್ತಿ ಮಾಡಿ. ಹಗಲಿನಲ್ಲಿ ನಿದ್ದೆ ಮಾಡುವ ಅಥವಾ ವಿಶ್ರಾಂತಿ ಪಡೆಯುವವರು ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆಯನ್ನು ತಪ್ಪದೇ ಬಳಸಿ.

LEAVE A REPLY

Please enter your comment!
Please enter your name here