ನಾನು ಮತ್ತೆ ಸಿಎಂ ಆದ್ರೆ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ಕೊಡ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿರಗುಪ್ಪದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಆಡಿದ ಮಾತು. ಕೆಲ ದಿನಗಳ ಹಿಂದಷ್ಟೇ ಮೈಸೂರಿನಲ್ಲಿ ಪ್ರಚಾರ ಮಾಡುವಾಗ ನಾನು ಮತ್ತೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದವರು ಇದೀಗ ನಾನು ಮತ್ತೆ ಸಿಎಂ ಆದರೆ ಎನ್ನುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ತ ತಾಲೂಕು ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಕೊಪ್ಪಳದ ಅಭ್ಯರ್ಥಿ ಬಸವರಾಜ ಹಿಟ್ನಾಳ್ ಪರ ಮತ ಯಾಚನೆ ಮಾಡುವಾಗ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

Leave a Reply