ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಲಿಯಲ್ಲಿ ಭಯಾನಕ ಘಟನೆಯೊಂದು ವರದಿಯಾಗಿದೆ. 15 ವರ್ಷದ ಬಾಲಕಿಯೊಂದಿಗೆ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, 33 ಜನರು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು 24 ಜನರನ್ನು ಬಂಧಿಸಿದ್ದು, ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದಾರೆ.
ವರದಿಯ ಪ್ರಕಾರ, ಸಂತ್ರಸ್ತರು ಪೊಲೀಸರನ್ನು ಸಂಪರ್ಕಿಸಿ ಈ ವಿಷಯದ ಬಗ್ಗೆ ಮಾಹಿತಿ ನೀಡಿದರು. ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು ಆರೋಪಿಗಳ ವಿರುದ್ಧ 376 (ಅತ್ಯಾಚಾರ), 376 (n), 376 (3), 376 (d) ಮತ್ತು 4.6 ಮತ್ತು 10 ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (POCSO) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಂತ್ರಸ್ತ ಬಾಲಕಿಯ ಪ್ರಕಾರ, ಜನವರಿ 2021 ಮತ್ತು ಸೆಪ್ಟೆಂಬರ್ 2021 ರ ನಡುವೆ, 33 ಜನರು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ.
ಸಂತ್ರಸ್ತ ಬಾಲಕಿ ಮೊದಲು ಆಕೆಯ ಸ್ನೇಹಿತನಿಂದ ಅತ್ಯಾಚಾರಕ್ಕೆ ಒಳಗಾಗಿ, ಈ ವಿಕೃತಿಯನ್ನು ಅವರು ವಿಡಿಯೋ ಮಾಡಿದ್ದರು.. ಈ ವಿಡಿಯೋ ಮುಂದಿಟ್ಟು ಇತರ ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದರು. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.ಪೊಲೀಸರ ಪ್ರಕಾರ, ಹಲವು ಆರೋಪಿಗಳು ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಹೊಂದಿದ್ದಾರೆ.