ತುಮಕೂರು: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ಇಂದಿರಾ ಕ್ಯಾಂಟೀನ್ ನ್ನು ಉದ್ಘಾಟಿಸಿದರು. ಕ್ಯಾಂಟೀನ್ ನ್ನು ಉದ್ಘಾಟಿಸಿದ ನಂತರ ಮುಖ್ಯಮಂತ್ರಿ ತಮ್ಮ ಸಹೋದ್ಯೋಗಿಗಳು ಮತ್ತು ಇತರ ಅತಿಥಿಗಳ ಜೊತೆ ಉಪ್ಪಿಟ್ಟು ಮತ್ತು ಕೇಸರಿಬಾತು ರುಚಿಯನ್ನು ಸವಿದರು.

ಬೆಂಗಳೂರಿನಿಂದ ಹೊರಗೆ ರಾಜ್ಯದ ಬೇರೆ ಭಾಗಗಳಲ್ಲಿ ಇಂದಿರಾ ಕ್ಯಾಂಟೀನ್ ನ್ನು ತೆರೆಯುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ನವ ಕರ್ನಾಟಕ ಯಾತ್ರೆಯ ಭಾಗವಾಗಿ ಶಿರಾಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ನಿನ್ನೆಯೇ ಕ್ಯಾಂಟೀನ್ ನ್ನು ಉದ್ಘಾಟಿಸಿ ಕೊಟ್ಟ ಮಾತಿನಂತೆ ನಡೆದುಕೊಂಡರು.

ಬಡಬಗ್ಗರಿಗೆ ಮತ್ತು ಅಗತ್ಯವಿರುವವರಿಗೆ ಕಡಿಮೆ ದರದಲ್ಲಿ ಊಟ ತಿಂಡಿ ಸಿಗಬೇಕು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೆ ತಂದಿತ್ತು. ಇದಕ್ಕೆ ರಾಜ್ಯದಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶಿರಾ ಪುರಸಭೆ ಮಂಡಳಿ ಕಚೇರಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ನ್ನು ತೆರೆಯಲಾಗಿದೆ. ಇದು ಸರ್ಕಾರಿ ಆಸ್ಪತ್ರೆಯ ಎದುರು ಇದೆ. ಬೆಂಗಳೂರಿನಿಂದ ಹೊರಗೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಿರಾದಲ್ಲಿ ಇಂದಿರಾ ಕ್ಯಾಂಟೀನ್ ಶಿರಾದಲ್ಲಿ ಪ್ರಾರಂಭವಾಗಿದೆ.

ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ ಎಲ್ಲಾ 198 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ನ್ನು ಆರಂಭಿಸಲು ರಾಜ್ಯ ಸರ್ಕಾರ ಯೋಜಿಸಿದ್ದು ಈಗಾಗಲೇ ಹಲವೆಡೆ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನಿಂದ ಹೊರಗೆ ಜಿಲ್ಲಾ ಕೇಂದ್ರಗಳಲ್ಲಿ 171 ತಾಲ್ಲೂಕುಗಳಲ್ಲಿ 246 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ಹಾಕಿಕೊಂಡಿದೆ.

Leave a Reply