ನಾವು ಅಧಿಕಾರಕ್ಕೆ ಬಂದರೆ ದಲಿತ ಹಾಗೂ ಅಲ್ಪಸಂಖ್ಯಾತ ವ್ಯಕ್ತಿಗಳನ್ನು ಉಪಮುಖ್ಯಮಂತ್ರಿ ಮಾಡುತ್ತೇವೆಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ಜೆಡಿಎಸ್‌ನವರು ದಲಿತರನ್ನು ಏಕೆ ಸಿಎಂ ಮಾಡಬಾರದು. ದೇವೇಗೌಡರು ಕುಮಾರಸ್ವಾಮಿ ಸಿಎಂ ಆಗಬೇಕೆಂಬ ಕೊನೇ ಆಸೆ ಹೊಂದಿದ್ದಾರಂತೆ. ಅದೇ ದಲಿತರೊಬ್ಬರು ಪಕ್ಷದಿಂದ ಸಿಎಂ ಆಗಲಿ ಎಂದು ದೇವೇಗೌಡರು ಏಕೆ ಆಸೆ ಇಟ್ಟುಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬಾಗೇಪಲ್ಲಿಯಲ್ಲಿ ಶುಕ್ರವಾರ ನಡೆದ ಸಾಧನಾ ಸಂಭ್ರಮ ಸಮಾವೇಶದಲ್ಲಿ ಅವರು ಮಾತನಾಡಿದ್ದರು.

ಬಿಜೆಪಿ ಸರ್ಕಾರ ಐದು ವರ್ಷ ಅಧಿಕಾರದಲ್ಲಿತ್ತು. ಕುಮಾರಸ್ವಾಮಿ ಕೂಡ ಸಿಎಂ ಆಗಿದ್ದರು. ಆದರೆ, ಬಡವರ ಬಗ್ಗೆ ಯಡಿಯೂರಪ್ಪ, ಕುಮಾರಸ್ವಾಮಿ ಒಂದು ದಿನವೂ ಮಾತನಾಡಿರಲಿಲ್ಲ. ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಗ್ರಾಮ ವಾಸ್ತವ್ಯ ಬಿಟ್ಟರೆ ಬೇರೆನೂ ಮಾಡಲಿಲ್ಲ. ರಾಜ್ಯದ ಬಡವರ ಆರ್ಥಿಕ ಪ್ರಗತಿಗೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು. ಏನೇ ತಿಪ್ಪರಲಾಗ ಹಾಕಿದರೂ ಅವರಿಬ್ಬರು ಮುಖ್ಯಮಂತ್ರಿ ಆಗುವುದಿಲ್ಲ ಎಂದರು.

Leave a Reply