Representational Image

ಅಲಿಗಢ: ಅಯೋಧ್ಯೆಯಲ್ಲಿ ರಾಮಮಂದಿರ ಮತ್ತು ಬಾಬರಿ ಮಸೀದಿ ಕುರಿತು ಸುಪ್ರೀಂಕೋರ್ಟ್ ತೀರ್ಪು ಹೊರಬೀಳುವ ಮುನ್ನವೇ ಕೆಲವು ಬಿಜೆಪಿ ನಾಯಕರು ಬಹಿರಂಗ ಬಹಿರಂಗ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಾಬರಿ ಮಸೀದಿ ಮತ್ತು ರಾಮಮಂದಿರ ವಿವಾದ ನ್ಯಾಯಾಲಯದ ಮುಂದಿರುವಾಗ ಈ ರೀತಿಯ ಹೇಳಿಕೆ ನೀಡುವುದು ಸಮಂಜಸವಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂಕೋರ್ಟ್ನ ತೀರ್ಪಿಗೆ ಎಲ್ಲರೂ ಬದ್ಧರಾಗಿರಬೇಕಾಗಿದ್ದು, ಅದಾದ ಬಳಿಕ ಮುಂದಿನ ಚರ್ಚೆ ಸೂಕ್ತವೆಂದು ಅಭಿಪ್ರಾಯಪಟ್ಟಿದ್ದಾರೆ.

1192 ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಕಟ್ಟಡವನ್ನು ಧ್ವಂಸಗೊಳಿಸುವ ಸಂದರ್ಭದಲ್ಲಿ ಬಿಜೆಪಿ ಹಿರಿಯ ಧುರೀಣರಾದ ಕಲ್ಯಾಣಸಿಂಗ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜ್ಯಪಾಲ ಹುದ್ದೆಯಿಂದ ನಿವೃತ್ತರಾದ ಬಳಿಕ ಇದೀಗ ಅವರು ಮತ್ತೆ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುತ್ತಿದ್ದಾರೆ

LEAVE A REPLY

Please enter your comment!
Please enter your name here