ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವಿವಿಧ ಕೋರ್ಸ್ ಗಳಿಗೆ 13,050 ವಿದೇಶಿ ವಿದ್ಯಾರ್ಥಿಗಳು ದಾಖಲಾತಿ ಮಾಡಿಕೊಂಡಿದ್ದಾರೆ. ದೇಶಾದ್ಯಂತ ವಿವಿಧ ಕಾಲೇಜುಗಳಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾತಿ ಮಾಡಿಕೊಂಡ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷ 47,575 ಆಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವದೇಕರ್ ಬಿಡುಗಡೆ ಮಾಡಿರುವ ಉನ್ನತ ಶಿಕ್ಷಣಗಳ ಅಖಿಲ ಭಾರತ ಸಮೀಕ್ಷೆ ಹೇಳಿದೆ.

ಆದ್ದರಿಂದ ಬೆಂಗಳೂರು: 2016-2017ರಲ್ಲಿ ಕರ್ನಾಟಕವು ಹೆಚ್ಚಿನ ಸಂಖ್ಯೆಯ ವಿದೇಶಿ ವಿದ್ಯಾರ್ಥಿಗಳನ್ನು ಆಕರ್ಷಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸ್ವಲ್ಪ ಕಡಿಮೆಯಾಗಿದೆ.

2015-16ರಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ 14,348 ಆಗಿದ್ದು ಕರ್ನಾಟಕ ರಾಜ್ಯದಲ್ಲಿ 1,290 ವಿದೇಶಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾತಿ ಮಾಡಿಕೊಂಡಿದ್ದಾರೆ.

ಭಾರತಕ್ಕೆ ಅಧ್ಯಯನಕ್ಕೆ ಆಗಮಿಸುವ ವಿದೇಶಿ ವಿದ್ಯಾರ್ಥಿಗಳಲ್ಲಿ ಅಧಿಕ ಮಂದಿ ನೇಪಾಳೀಯರು, ನಂತರದ ಸ್ಥಾನದಲ್ಲಿ ಆಫ್ಘಾನಿಸ್ತಾನ, ಭೂತಾನ್ ನಿಂದ ಅಧಿಕ ಮಂದಿ ಕಲಿಯಲು ಬರುತ್ತಾರೆ.

Leave a Reply