ಹೊಸದಿಲ್ಲಿ: ಕರ್ನಾಟಕ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದು , ರಾಜ್ಯದ ಸಚಿವ ಸಂಪುಟ ವಿಸ್ತರಣೆಗೆ ಶಿಘ್ರ ನಿರ್ಧರಿಸುವಂತೆ ಮನವಿ ಮಾಡಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಸರಕಾರ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದಲ್ಲಿ ಸುರಕ್ಷಿತವಾಗಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ವಸತಿಯಲ್ಲಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಗಳು ಸರಕಾರದ ನೂರು ದಿನಗಳ ಕೆಲಸಗಳ ಕುರಿತು ವಿವರಿಸಿದರು. ರಾಹುಲ್‍ರನ್ನು ಭೇಟಿಯಾದ ಬಳಿಕ ಕುಮಾರಸ್ವಾಮಿ ಪತ್ರಕರ್ತರನ್ನು ಭೇಟಿಯಾಗಿದ್ದು, ಮಂತ್ರಿಮಂಡಲ ವಿಸ್ತರಣೆಯ ಕುರಿತು ಮನವಿ ಮಾಡಿಕೊಂಡಿದ್ದಾರೆ. ಅದರಂತೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಿಸುವ ಕುರಿತು ಶೀಘ್ರ ನಿರ್ಧರಿಸಬೇಕು ಎಂದಿದ್ದೇನೆ ಎಂದು ತಿಳಿಸಿದರು.

ಈಗ ಕರ್ನಾಟಕದಲ್ಲಿ ಜೆಡಿಎಸ್‍ನಿಂದ ಹತ್ತು ಸಚಿವರು ಮತ್ತು ಕಾಂಗ್ರೆಸ್‍ನಿಂದ 16 ಸಚಿವರು ಇದ್ದಾರೆ. ಇನ್ನೂ ನಾಲ್ಕು ಸಚಿವರನ್ನು ನೇಮಕಗೊಳಿಸುವ ನಿರೀಕ್ಷೆ ಇದೆ. ಸಿದ್ಧರಾಮಯ್ಯರಿಂದ ಕಾಂಗ್ರೆಸ್ ಜೆಡಿಎಸ್ ಸಖ್ಯದಲ್ಲಿ ಭಿನ್ನಮತ ವ್ಯಕ್ತವಾದ ಹಿನ್ನೆಲೆಯಲ್ಲಿ ಕುಮಾರ ಸ್ವಾಮಿ ರಾಹುಲ್ ಗಾಂಧಿಯನ್ನು ಭೇಟಿಯಾದರು. ಶುಕ್ರವಾರ ಜೆಡಿಎಸ್ ಕಾಂಗ್ರೆಸ್ ಸಮನ್ವಯ ಸಮಿತಿಯ ಬೈಠಕ್ ಕೂಡ ನಡೆಯಲಿದೆ. ತಾನು ಮುಖ್ಯಮಂತ್ರಿ ಆಗ ಬಯಸಿದ್ದೇನೆ ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆಯ ಕುರಿತು ಪ್ರಶ್ನಿಸಿದಾಗ ಅವರು ಒಬ್ಬರು ರಾಜಕಾರಿಣಿ, ಒಂದು ವೇಳೆ ಮುಖ್ಯಮಂತ್ರಿಯಾಗುವ ಇಚ್ಛೆ ವ್ಯಕ್ತಪಡಿಸಿದರೆ ಅದರಲ್ಲಿ ಏನು ತಪ್ಪಿದೆ ಎಂದು ಕುಮಾರ ಸ್ವಾಮಿ ಹೇಳಿದರು.

Leave a Reply