ವಿಜಯಪುರ: ನೋಟು ಬದಲು, ದೇಶ ಮೊದಲು ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ರವರು, ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕ್ಷೇತ್ರ ಬಿಟ್ಟು ಮಂಗನಂತೆ ಇನ್ನೊಂದು ಕ್ಷೇತ್ರಕ್ಕೆ ಬದಲಾವಣೆ ಮಾಡಿದ್ದಾರೆ. ಅವರು ಗಾಂಧಿ ಕುಟುಂಬದ ದಾಸರಾಗಿದ್ದಾರೆ. ತಮ್ಮ ಮಗನಿಗೂ ಹೆಂಗಸರ ಹೆಸರನ್ನು ಇಟ್ಟಿದ್ದಾರೆ ಎಂದು ವ್ಯಂಗ್ಯ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆದ ಮೇಲಂತೂ ಹೊಸ ನೋಟು ಸಿಗುತ್ತಿಲ್ಲ ಎಂಬ ಆರೋಪವನ್ನು ಇದೀಗ ಕೈ ಬಿಟ್ಟಿದ್ದಾರೆ ಎಂದು ಇದೇ ವೇಳೆಯಲ್ಲಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದ ನೋಟ್ ಬ್ಯಾನನ್ನು ದೇಶದ ಜನ ಸ್ವಾಗತಿಸಿದ್ದಾರೆ. ಕಳೆದ ಐವತ್ತು ದಿನಗಳಿಂದ ಯಾವುದೇ ಗಲಭೆ ನಡೆದಿಲ್ಲ ಎಂದರು.
ನೋಟ್ ಬ್ಯಾನನ್ನು ವಿರೋಧಿಸಿದವರೇ ಹೆಚ್ಚು, ಆದರೆ ಮೋದಿಯವರು ದೇಶದ ಜನಹಿತಕ್ಕಾಗಿ ಈ ಕಾರ್ಯವನ್ನು ಕೈಗೊಂಡಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ನೋಟ್ ಬ್ಯಾನ್ ವಿರೋಧಿಸಿದ್ದರು. ಆದರೆ, ರಾಹುಲ್ ಗಾಂಧಿ ಒಂದೂವರೆ ತಿಂಗಳ ಹಿಂದೆ ಬ್ಯಾಂಕಿನಿಂದ ನಾಲ್ಕು ಸಾವಿರ ರೂಪಾಯಿ ಪಡೆದುಕೊಂಡು ಹೋದವರು ಇನ್ನೂ ಬ್ಯಾಂಕಿನತ್ತ ಬರಲೇ ಇಲ್ಲ. ರಾಷ್ಟ್ರಪಿತ ಮಹಾತ್ಮಾ ಗಾಂಧಿಗಿಂತಲೂ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಸರಳ ವ್ಯಕ್ತಿ ಎಂದು ವ್ಯಂಗ್ಯವಾಡಿದರು.