ನವದೆಹಲಿ : 2018 ರ ನೀಟ್ ಪರೀಕ್ಷೆಗೆ ಹಾಜರಾಗದಿದ್ದರೂ ವಿದೇಶದಲ್ಲಿ ಎಂಬಿಬಿಎಸ್ ಕೋರ್ಸ್ ಮಾಡಲು ಅಪೇಕ್ಷಿಸುವ ವಿದ್ಯಾರ್ಥಿಗಳಿಗೆ ಈಗ ಭಾರತೀಯ ವೈದ್ಯ ಮಂಡಳಿ ಒಂದು ಬಾರಿಯ ವಿನಾಯಿತಿ ನೀಡಿದೆ.

ಕೇಂದ್ರ ಸರಕಾರದ ಅಧಿಸೂಚನೆಯಂತೆ ಇಂತಹ ವಿದ್ಯಾರ್ಥಿಗಳು 2018 ರ ಮೇ ತಿಂಗಳಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿಲ್ಲ ಎಂಬ ಮುಚ್ಚಳಿಕೆ ಬರೆದು ಕೊಡಬೇಕು ಮತ್ತು ವಿದೇಶಿ ವೈದ್ಯಕೀಯ ಕಾಲೇಜುಗಳಲ್ಲಿ ಸೇರಲು ಭಾರತೀಯ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆಯಬೇಕಾಗಿದೆ ಎಂದು ಸೂಚಿಸಲಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವಾಲಯ ಜಂಟಿಯಾಗಿ ತೆಗೆದ ಈ ತೀರ್ಮಾನದಿಂದ ವಿದ್ಯಾರ್ಥಿಗಳಿಗೆ ಅವಕಾಶ ಲಭಿಸಿದೆ. ದೆಹಲಿ ಹೈಕೋರ್ಟ್ ಪ್ರಕರಣದಲ್ಲಿ ಹೊರಡಿಸಿದ ಆದೇಶದಂತೆ ಕೇಂದ್ರ ಸರಕಾರ ಈ ಅಧಿಸೂಚನೆ ಹೊರಡಿಸಿದೆ.

Leave a Reply