ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಂತ್ರಿ ಮಂಡಲದಿಂದ ರಾಜೀನಾಮೆ ಸಲ್ಲಿದ್ದಾರೆ. ರಾಷ್ಟ್ರ ಪತಿ ರಾಮ್ನಾಥ್ ಕೊವಿಂದ್ ರನ್ನು ಭೇಟಿ ಮಾಡಿದ ಅವರು, ರಾಜೀನಾಮೆ ಸಲ್ಲಿಸಿದರು. ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಸೇರುವ ಮೂಲಕ ಹಿಂದಿನ ಲೋಕ ಸಭೆ ವಿಸರ್ಜನೆಯ ನಿರ್ಣಯ ಕೈಗೊಳ್ಳಲಾಗಿದ್ದು, ರಾಜೀನಾಮೆಯನ್ನು ಅಂಗೀಕರಿಸಿದ ರಾಷ್ಟ್ರಪತಿ ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಅಧಿಕಾರದಲ್ಲಿ ಮುಂದುವರಿಯುವಂತೆ ಸೂಚಿಸಿದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 542 ಕ್ಷೇತ್ರಗಳಲ್ಲಿ ಬಿಜೆಪಿ 303 ಸ್ಥಾನಗಳನ್ನು ಗಳಿಸಿ ಏಕೈಕ ದೊಡ್ಡ ಪಕ್ಷವಾಗಿ ಮತ್ತೊಮ್ಮೆ ಅಧಿಕಾರ ನಡೆಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದ್ದು, ಈ ತಿಂಗಳ ಕೊನೆಯಲ್ಲಿ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ.

 

Leave a Reply