ಮುಂಬೈ: ಮಹಾರಾಷ್ಟ್ರದ ಎಂವಿಎ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಶೇ.5ರಷ್ಟು ಮೀಸಲಾತಿ ನೀಡುವ ಕಾನೂನನ್ನು ತರಲು ಉದ್ದೇಶಿಸಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ತಿಳಿಸಿದ್ದಾರೆ.  ಅಲ್ಲಿನ ವಿಧಾನ ಪರಿಷತ್‌ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಮಲಿಕ್, ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿ ಅನ್ವಯಿಸಬಹುದಾಗಿದೆ. ಆದರೆ ಈ ಕುರಿತು ಕಾನೂನು ತಿದ್ದುಪಡಿ ಆಗತ್ಯ ಎಂದು ತಿಳಿಸಿದರು. ಅಷ್ಟೇ ಅಲ್ಲ, ಮೀಸಲಾತಿಗೆ ಶಿವಸೇನಾದ ಬೆಂಬಲವೂ ಇದೆ ಎಂದು ಮಲಿಕ್ ಸ್ಪಷ್ಟಪಡಿಸಿದರು.

ಆದರೆ ಈ ಕುರಿತು ಸದನದ ಹೊರಗೆ ಆದಿತ್ಯ ಶಾಸ್ತ್ರಿ ಅವರನ್ನು ಪತ್ರಕರ್ತರು ಪ್ರಶ್ನಿಸಿದಾಗ ಅವರು ಉತ್ತರ ಕೊಡದೆ ನುಣುಚಿಕೊಂಡಿದ್ದಾರೆ. 2014ರಲ್ಲಿನ ಕಾಂಗ್ರೆಸ್-ಎನ್‌ಸಿಪಿ ಮೈತ್ರಿ ಸರ್ಕಾರ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಶೇ.14 ಮತ್ತು ಮುಸ್ಲಿಮರಿಗೆ ಶೇ.5ರಷ್ಟು ಮೀಸಲಾತಿ ಕುರಿತು ನಿರ್ಧಾರ ಕೈಗೊಂಡಿತ್ತು. ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಕುರಿತು ನಂತರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿ, ಬಾಂಬೆ ಹೈಕೋರ್ಟ್‌ ರದ್ದುಗೊಳಿಸಿ ಆದೇಶ ನೀಡಿತ್ತು. ಆದರೆ 2014ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದಕ್ಕೆ ಸಹಮತ ವ್ಯಕ್ತಪಡಿಸಿರಲಿಲ್ಲ.

LEAVE A REPLY

Please enter your comment!
Please enter your name here