ಭೋಪಾಲ್: ಮುಂದಿನ ನಾಲ್ಕು ತಿಂಗಳಲ್ಲಿ ಗಗನ ಚುಂಬಿ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಜಬಲ್ಪುರದಲ್ಲಿ ಆಯೋಜಿಸಲಾಗಿದ್ದ ರ‍್ಯಾಲಿಯನ್ನುದ್ದೇಶಿಸಿ ಬಿಜೆಪಿ ಅಧ್ಯಕ್ಷ ಗೃಹ ಸಚಿವ ಅಮಿತ್ ಶಾಹ್ ಘೋಷಣೆ ಮಾಡಿದ್ದಾರೆ. ರಾಮಮಂದಿರ ನಿರ್ಮಿಸಬೇಕೇ ಅಥವಾ ಬೇಡವೇ? ಕಾಂಗ್ರೆಸ್ ನಾಯಕ ಹಾಗೂ ವಕೀಲ ಕಪಿಲ್ ಸಿಬಲ್ ಅದನ್ನು ನಿರ್ಮಿಸಬಾರದು ಎನ್ನುತ್ತಿದ್ದಾರೆ. ಸಿಬಾಲ್ ಭಾಯ್, ತಾಕತ್ತಿದ್ದರೆ ಅದನ್ನು ತಡೆಯಿರಿ. ಗಗನಚುಂಬಿ ರಾಮಮಂದಿರ ಮುಂದಿನ ನಾಲ್ಕು ತಿಂಗಳ ಒಳಗಾಗಿ ನಿರ್ಮಾಣವಾಗಲಿದೆ ಮಾತ್ರವಲ್ಲ ಈ ಸಂದರ್ಭದಲ್ಲಿ ಜೆ ಏನ್ ಯೂ ನಲ್ಲಿ ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ. ಇಂಥವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here