ಚೆನ್ನಗಿರಿ : ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರಕಾರ ಐದು ವರ್ಷ ಪೂರ್ತಿಗೊಳಿಸುತ್ತದೆ, ಮಾತ್ರವಲ್ಲ ಕುಮಾರ ಸ್ವಾಮಿ ಐದು ವರ್ಷ ಮುಖ್ಯ ಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಆದ್ದರಿಂದ ಸಮ್ಮಿಶ್ರ ಸರಕಾರದಲ್ಲಿ ಗೊಂದಲವೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡೂರಾವ್ ಹೇಳಿದರು
ಅವರು ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತಾಡುತ್ತಿದ್ದರು.
ಸಮ್ಮಿಶ್ರ ಸರ್ಕಾರ ಎಂದ ಮೇಲೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಸಹಜ. ನಾವು ಸಮನ್ವಯ ಸಮಿತಿ ನಿರ್ಧಾರದಂತೆ ಮುಂದೆ ಸಾಗುತ್ತೇವೆ. ಜನರ ತೀರ್ಪಿಗೆ ತಲೆ ಬಾಗುತ್ತೇವೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎಂಬ ಕಾರಣಕ್ಕಾಗಿ ಜೆಡಿಎಸ್ ನೊಂದಿಗೆ ಕೈ ಜೋಡಿಸಿದ್ದೇವೆ. ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಕಟ್ಟುತ್ತೇನೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.