ಬೆಂಗಳೂರು: ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.

2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ.

ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ ವರ್ಕ್‌ ನೀಡಬಾರದು ಎಂದು ಮೇ 3ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಎನ್‌ಸಿಇಆರ್‌ಟಿ ನಿಗದಿಪಡಿಸಿರುವ ಭಾಷೆ ಮತ್ತು ಗಣಿತ ವಿಷಯ ಹಾಗೂ 3ರಿಂದ 5ನೇ ತರಗತಿ ಮಕ್ಕಳಿಗೆ ಭಾಷೆ, ಪರಿಸರ ವಿಜ್ಞಾನ ಹಾಗೂ ಗಣಿತ ಹೊರತುಪಡಿಸಿ ಇನ್ಯಾವುದೇ ಪಠ್ಯಕ್ರಮವನ್ನು ನಿಗದಿಪಡಿಸಬಾರದು ಎಂದು ಖಡಕ್‌ ಎಚ್ಚರಿಕೆ ನೀಡಿದೆ.

Leave a Reply