ಅಹಮದಾಬಾದ್: ವಿಶ್ವದಲ್ಲೇ ಅತಿ ಎತ್ತರದ ಪ್ರತಿಮೆ ಎನ್ನಲಾಗಿರುವ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಾ ಬಾಯಿ ಪಟೇಲ್ ಅವರ ಪ್ರತಿಮೆಯನ್ನು ಅಕ್ಟೋಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ಅನಾವರಣ ಮಾಡಲಿದ್ದಾರೆಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಿಳಿಸಿದ್ದಾರೆ.
ನಕ್ಸಲಿಸಂ ಹಾಗೂ ಇನ್ನಿತರ ವಿಷಯಗಳ ಮೂಲಕ ದೇಶದ ಏಕತೆಯನ್ನು ಒಡೆಯುವ ಸಂದರ್ಭದಲ್ಲಿ ಗುಜರಾತ್’ನ ಅಹಮದಾಬಾದ್’ನಲ್ಲಿ ನಿರ್ಮಿಸಲಾಗಿರುವ 182 ಅಡಿ ಎತ್ತರದ ಪ್ರತಿಮೆಯು ದೇಶದ ಏಕತೆ ಮತ್ತು ಸಮಗ್ರತೆಯ ಚಿಹ್ನೆ. ಈ ಪ್ರತಿಮೆಯನ್ನು ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಜನ್ಮದಿನಾಚರಣೆಯಂದು ಲೋಕಾರ್ಪಣೆ ಮಾಡಲಾಗುವುದು ಎಂದು ರೂಪಾನಿ ತಿಳಿಸಿದ್ದಾರೆ.
ಸರ್ದಾರ್ ವಲ್ಲಭ ಭಾಯ್ ಪಟೇಲ್ ರನ್ನು ಕಾಂಗ್ರೆಸ್ ಮೂಲೆ ಗುಂಪು ಮಾಡಿದೆ ಎಂದು ಅವರು ಆರೋಪಿಸಿದರು.