ಪೊಲೀಸ್ ಠಾಣೆಯಲ್ಲಿ ಟ್ರಾನ್ಸ್ ಜೆಂಡರ್ ಗಳಿಗೆ ಲಾಠಿಯಿಂದ ಥಳಿಸುವ ವಿಡಿಯೋ ವೊಂದು ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸದ್ದು ಮಾಡುತ್ತಿದೆ.
ವಿಡಿಯೋದಲ್ಲಿ ಅವರ ಮೇಲೆ ನಿಷ್ಕರುಣೆಯಿಂದ ಲಾಠಿ ಬಿಸಲಾಗುತ್ತಿದೆ.
ಮೀರತ್ನ ಲಲ್ಕುಟ್ಟಿ ಪೊಲೀಸ್ ಠಾಣೆಯಲ್ಲಿ ಸೋಮವಾರದಂದು ಈ ಘಟನೆ ನಡೆದಿದ್ದು, ಪೊಲೀಸರು ಲಾಠಿ ಬೀಸುವ ವೀಡಿಯೊ ಬಳಿಕ ಹೊರ ಬರಲಾಗಿದೆ.
ಈ ಟ್ರಾನ್ಸ್ ಜೆಂಡರ್ ಗಳ ಎರಡು ಗುಂಪು ಪೊಲೀಸ್ ಠಾಣೆಯಲ್ಲಿ ಪರಸ್ಪರ ಜಗಳವಾಡುತ್ತಿದ್ದು, ಅವರನ್ನು ತಡೆಯಲಿಕ್ಕಾಗಿ ಲಾಠಿ ಪ್ರಹಾರ ಮಾಡಬೇಕಾಯಿತು ಎಂದು ಪೊಲೀಸರು ಸಮಜಾಯಿಷಿ ನೀಡಿದ್ದಾರೆ.
ಒಂದು ವೇಳೆ ಅಗತ್ಯಕ್ಕಿಂತ ಹೆಚ್ಚು ಬಲ ಪ್ರಯೋಗ ಮಾಡಿ ಲಾಠಿ ಪ್ರಹಾರ ಮಾಡಲಾಗಿದ್ದರೆ ಆ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಅಧಿಕಾರಿಗಳು ಹೇಳಿದ್ದಾರೆ.

Leave a Reply