ಮಂಗಳೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳದ ಯುವ ವಿಭಾಗ ಹಾಗೂ ದುರ್ಗಾವಾಹಿನಿ ವತಿಯಿಂದ ಲವ್ ಜಿಹಾದ್ ವಿರುದ್ಧ ಜನಜಾಗೃತಿ ಅಭಿಯಾನವನ್ನು ಇದೇ 3 ರಿಂದ 15 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ತಿಳಿಸಿದರು.

ಹಿಂದೂಗಳ ಸಂಖ್ಯೆ ಕಡಿಮೆಯಾಗಿ, ಮದುವೆಗೆ ಕನ್ಯೆಯರು ಸಿಗಿತ್ತಿಲ್ಲ. ಅದರ ಜೊತೆಗೆ ಲವ್ ಜಿಹಾದ್ ಮಾಡಿ ಮತಾಂತರ ಮಾಡಲಾಗುತ್ತಿದೆ. ಹಿಂದೂ ಸಮಾಜದವರು ಒಟ್ಟಾಗಿ ಇದರ ವಿರುದ್ಧ ಹೋರಾಟ ಮಾಡುವುದು. ಮುಸ್ಲಿಂ ಜಿಹಾದಿ ಮಾನಸಿಕತೆ ಇರುವ ಯುವಕರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವಾರ್ಡ್, ಗ್ರಾಮಗಳಲ್ಲಿ ಜನ ಕಾರ್ಯಕ್ರಮ ನಡೆಸಿ, ಗ್ರಾಮಕ್ಕೊಂದು ಸಮಿತಿ ರಚಿಸಿ, ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದರು.

Leave a Reply