ನವದೆಹಲಿ: ಯಾವುದೇ ಕಾರಣಕ್ಕೂ ಮರಳಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗಾದಿಗೇರುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ಗಾಂಧಿ ಅವರು ಖಡಾಖಂಡಿತವಾಗಿ ಹೇಳಿದ್ದಾರೆ. ಪಕ್ಷದ ಜವಾಬ್ದಾರಿ ಮರಳಿ ಸ್ವೀಕರಿಸುತ್ತೀರಾ ಎಂಬ ಪ್ರಶ್ನೆಗೆ ಇಲ್ಲವೇ ಇಲ್ಲ ಎಂದು ರಾಹುಲ್ ಉತ್ತುಸಿದ್ದಾರೆ. ಲೋಕಸಭಾ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಮರಳಿ ಅಧ್ಯಕ್ಷ ಸ್ಥಾನ ಸ್ವೀಕರಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಮುಂದಿನ ತಿಂಗಳು ಕಾಂಗ್ರೆಸ್ ಕಾರ್ಯಕಾರಣಿ ಸಭೆ ನಡೆಯಲಿದ್ದು, ಈ ವೇಳೆ ಪಕ್ಷಕ್ಕೆ ಖಾಯಂ ಅಧ್ಯಕ್ಷರನ್ನು ನೇಮಿಸುವ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಅವರನ್ನೇ ಮತ್ತೆ ಅಧ್ಯಕ್ಷ ಗಾದಿ ಸ್ವೀಕರಿಸುವಂತೆ ಮುಖಂಡರು ಮನವಿ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸೋನಿಯಾ ಗಾಂಧಿ ಹಾಗೂ ಇತರ ಹಿರಿಯ ನಾಯಕರು ರಾಹುಲ್ ಅವರಿಗೇ ಪಟ್ಟಕಟ್ಟಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ತೀವ್ರ ನಾಯಕತ್ವ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್, ಹೇಗಾದರೂ ಮಾಡಿ ಪಕ್ಷಕ್ಕೆ ಖಾಯಂ ಅಧ್ಯಕ್ಷರನ್ನು ನೇಮಿಸಲು ಹೆಣಗುತ್ತಿದೆ.

Leave a Reply