Jaipur: Congress workers and supporters celebrate the party's winning trend in the Rajasthan Assembly elections, at the party office in Jaipur, Tuesday, Dec 11, 2018. (PTI Photo) (PTI12_11_2018_000078B)

ರಾಜಸ್ಥಾನ ಮುನ್ಸಿಪಲ್ ಚುನಾವಣೆಯ ಫಲಿತಾಂಶ ಹೊರ ಬಂದಿದ್ದು ಬಿಜೆಪಿ ಕಾಂಗ್ರೆಸ್ ಮತ್ತು ಸ್ವತಂತ್ರ ಅಭ್ಯರ್ಥಿಗಳು ಬೆಳಿಗ್ಗೆಯಿಂದ ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದರು. ನ್ಯೂಸ್ ಟ್ರ್ಯಾಕ್ ನಲ್ಲಿ ಪ್ರಕಟವಾದ ಸುದ್ದಿಯ ಪ್ರಕಾರ ಈ ಫಲಿತಾಂಶದಲ್ಲಿ ಕಾಂಗ್ರೆಸ್ ದೊಡ್ಡ ಗೆಲುವು ದಾಖಲಿಸಿದೆ.

2105 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ 961 ವಾರ್ಡ್ಗಳಲ್ಲಿ ಕಾಂಗ್ರೆಸ್ ಗೆದ್ದರೆ 737 ವಾರ್ಡ್ಗಳಲ್ಲಿ ಬಿಜೆಪಿ ಜಯಗಳಿಸಿದೆ. 386 ವಾರ್ಡ್ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಬಿಎಸ್ಪಿ 16 ವಾರ್ಡಗಳಲ್ಲಿ ಗೆದ್ದರೆ, ಎಸ್ಡಿಪಿಐ 4, ಸಿಪಿಐ(ಎಂ) 2 ವಾರ್ಡ್ಗಳನ್ನು ಗೆದ್ದಿದೆ. ಕಾಂಗ್ರೆಸ್ನ ಐತಿಹಾಸಿಕ ಏರಿಕೆಯ ಗೆಲುವಿನ ಬಳಿಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮತ್ತು ವಿಜಯದ ಸಂಭ್ರಮ ಗೋಚರಿಸುತ್ತಿದೆ.

ಕಾಂಗ್ರೆಸ್ ನಾಯಕರು ಪಟಾಕಿ ಸಿಡಿಸಿ ಪರಸ್ಪರ ಸಿಹಿತಿಂಡಿಗಳನ್ನು ಕೊಟ್ಟು ವಿಜಯೋತ್ಸವವನ್ನು ಸಂಭ್ರಮಿಸಿದರು. ಈ ವಿಜಯದ ಬಳಿಕ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದು ಎಲ್ಲ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದರು.

“ಜನರು ನಮ್ಮ ಸರಕಾರ ಸಾರ್ವಜನಿಕ ಕಲ್ಯಾಣ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡಿದರು. ಮಾತ್ರವಲ್ಲ ಸೂಕ್ಷ್ಮ ಜವಾಬ್ದಾರಿಯುತ ಮತ್ತು ಪಾರದರ್ಶಕ ಆಡಳಿತ ಉತ್ತಮ ಆಡಳಿತವನ್ನು ಒದಗಿಸುವ ನಮ್ಮ ಬದ್ದತೆಯನ್ನು ಜನರು ಮೆಚ್ಚಿದ್ದಾರೆ ಎಂದು ಅವರು ಹೇಳಿದರು.

Leave a Reply