ಕೇಂದ್ರ ಕಾರಾಗೃಹದಲ್ಲಿ ಖೈದಿಯಾಗಿದ್ದ ವಿಕೃತ ಕಾಮಿ ಸೈಕೋ ಜಯಶಂಕರ್ ಆತ್ಮಹತ್ಯೆ ಮಾಡಿದ್ದಾಗಿ ಮೂಲಗಳಿಂದ ತಿಳಿದು ಬಂದಿದೆ.

ಪೊಲೀಸ್ ಪೇದೆಯ ಪತ್ನಿ ಸೇರಿ 19ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ವೆಸಗಿದ್ದ ಈ ವಿಕೃತ ಕಾಮಿ.

ರಾತ್ರಿ ಸುಮಾರು 2 ಗಂಟೆಯ ವೇಳೆ ಬ್ಲೇಡ್ ನಿಂದ ಕತ್ತುಕೊಯ್ದುಕೊಂಡು ಜೈಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಕೂಡಲೇ ಜೈಶಂಕರ್ ನನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ದಾರಿಯ ಮಧ್ಯೆ ಜೈಶಂಕರ್ ಕೊನೆಯುಸಿರೆಳೆದಿದ್ದಾನೆ ಎಂದು ಹೇಳಲಾಗಿದೆ.

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ ಈ ಸೈಕೋ ಆರೋಪಿಯನ್ನು ಪ್ರತ್ಯೇಕ ಸೆಲ್ ನಲ್ಲಿ ಇಡಲಾಗಿತ್ತು. ಎರಡು ವರ್ಷಗಳ ಹಿಂದೆ ಜೈಲಿನ ರಕ್ಷಣಾ ಗೋಡೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಕಾಲು ಮುರಿದುಕೊಂಡಿದ್ದ.

ತಮಿಳುನಾಡಿನಲ್ಲಿ 11 ಮಹಿಳೆಯರು , ಕರ್ನಾಟಕದ ಲ್ಲಿ 4 ಮಹಿಳೆಯರ ಅತ್ಯಾಚಾರ, ಕೊಲೆ ಪ್ರಕರಣಗಳು ಈತನ ವಿರುದ್ಧ ದಾಖಲಾಗಿತ್ತು. ತಮಿಳುನಾಡಿನ ಸೇಲಂನ ಸೈಕೋ ಜೈಶಂಕರ್ ಕೊಯಮತ್ತೂರಿನಲ್ಲಿ ಲಾರಿಚಾಲಕನಾಗಿ ಕೆಲಸ ಮಾಡುತ್ತಿದ್ದ.

Leave a Reply