ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ 35 ವರ್ಷದ ಅನುಭವಿ ಬ್ಯಾಟ್ಸ್‌ಮನ್‌ ಡಿ’ವಿಲಿಯರ್ಸ್‌, ಈ ಬಾರಿಯ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಪರ ಆಡುವ ಇಂಗಿತ ವ್ಯಕ್ತ ಪಡಿಸಿದದ್ದರೂ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿ (ಕ್ರಿಕೆಟ್‌ ಸೌತ್‌ ಆಫ್ರಿಕಾ) ಅದಕ್ಕೆ ಅವಕಾಶ ನೀಡಲಿಲ್ಲ. ಆ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಚರ್ಚೆಗಳು ನಡೆದಿತ್ತು. ವಿಶ್ವಕಪ್ ಕ್ರಿಕೆಟ್ ಆಡುವ ಕುರಿತಾದ ವಿವಾದದ ಬಗ್ಗೆ ದಕ್ಷಿಣಾಫ್ರಿಕಾದ ಕ್ರಿಕೆಟಿಗ ಎ. ಬಿ. ಡಿವಿಲಿಯರ್ಸ್ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ವಿಶ್ವಕಪ್ ಆಡುತ್ತಿರುವ ತಂಡಗಳ ಮೇಲೆ ಹೆಚ್ಚು ಗಮನ ಕೊಡಬೇಕಾಗಿದೆ. ಕ್ರಮಿಸಲು ದೂರ ಇದೆ. ನಮ್ಮ ಯುವಕರು ಅದನ್ನು ಸಾಧಿಸುತ್ತಾರೆ ಎಂಬ ವಿಶ್ವಾಸ ನನಗಿದೆ” ಎಂದು ಟ್ವೀಟ್ ಮಾಡಿದ್ದಾರೆ. “ವಿಶ್ವಕಪ್‌ ತಂಡದ ಆಯ್ಕೆಗೆ ಪರಿಗಣಿಸಲು ಅವರು ತವರಿನಲ್ಲಿ ನಡೆದ ಶ್ರೀಲಂಕಾ ಮತ್ತು ಪಾಕಿಸ್ತಾನ ವಿರುದ್ಧದ ಸರಣಿಗಳಲ್ಲಿ ಆಡಬೇಕಿತ್ತು. ಆದರೆ, ಇದರ ಬದಲಾಗಿ ಪಾಕಿಸ್ತಾನ ಸೂಪರ್‌ ಲೀಗ್‌ ಮತ್ತು ಬಾಂಗ್ಲಾ ಪ್ರೀಮಿಯರ್‌ ಲೀಗ್‌ಗಳಲ್ಲಿ ಆಡಲು ಮುಂದಾದರು. ನಿವೃತ್ತಿ ದಿನಗಳನ್ನು ಆನಂದಿಸುತ್ತಿರುವುದಾಗಿ ಹೇಳಿದ ಅವರು ನಮ್ಮ ಆಹ್ವಾನವನ್ನು ತಿರಸ್ಕರಿಸಿದರು ಎಂದು ಕ್ರಿಕೆಟ್‌ ಸೌತ್‌ ಆಫ್ರಿಕಾದ ಆಯ್ಕೆ ಸಮಿತಿಯ ಸಂಚಾಲಕ ಲಿಂಡಾ ಝೊಂಡಿ ಹೇಳಿದ್ದರು.

 

Leave a Reply