ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸಮನ್ ರೋಹಿತ್ ಶರ್ಮ ತನ್ನ ಹೆಸರಿಗೆ ಹೊಸ ದಾಖಲೆಯನ್ನು ಬರೆದಿದ್ದಾರೆ. ಒಂದೇ ಟೆಸ್ಟ್ ಪಂದ್ಯದಲ್ಲಿ ಭಾರತದ ಓಪನರ್ ಬ್ಯಾಟ್ಸಮನ್ ಆಗಿ ಎರಡು ಶತಕಗಳನ್ನು ಬಾರಿಸುವ ಮೂಲಕ 41 ವರ್ಷದ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಹಿಂದೆ ಗಾವಸ್ಕರ ಒಂದೇ ಟೆಸ್ಟ್ ಪಂದ್ಯದಲ್ಲಿ ಎರಡು ಶತಕ ಬಾರಿಸಿದ್ದರು.

ಈ ಮೊದಲು ಈ ದಾಖಲೆ ಸುನಿಲ್ ಗವಾಸ್ಕರ್ (1978/79) ಹೆಸರಿನಲ್ಲಿತ್ತು. 32 ವರ್ಷದ ರೋಹಿತ್ ಶರ್ಮ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 244 ಎಸೆತಗಳಲ್ಲಿ 176 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 133 ಎಸೆತಗಳಲ್ಲಿ 100 ರನ್ ಗಳಿಸಿದರು.

LEAVE A REPLY

Please enter your comment!
Please enter your name here