ಭೋಪಾಲ್ನಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಬಿಜೆಪಿ ಸಾಧ್ವಿ ಪ್ರಜ್ಞಾ ರಿಗೆ ಟಿಕೆಟ್ ನೀಡಿದೆ. ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಭೋಪಾಲ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ವಿಶೇಷವೆಂದರೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದೇ ವೇಳೆ ಬಿಜೆಪಿ ಮಧ್ಯಪ್ರದೇಶದ ಸಾಗರ್, ವಿದಿಶಾ, ಗುನಾ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿ ವರ್ಷಗಳ ಕಾಲ ಜೈಲಿನಲ್ಲಿ ಕಳೆದ ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ಯಾವುದೇ ಸಾಕ್ಷ್ಯಾಧಾರವಿಲ್ಲ ಎಂದು ಎನ್‌ಐಎ ಬಿಡುಗಡೆ ಮಾಡಿತ್ತು.

Leave a Reply