ಮುಂದಿನ ಐದು ವರ್ಷಗಳಲ್ಲಿ 5 ಕೋಟಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಗಳನ್ನು ಕೇಂದ್ರ ಸರಕಾರದ ವತಿಯಿಂದ ನೀಡಲಾಗುತ್ತದೆ, ಇದರಲ್ಲಿ ಶೇ.50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿರುತ್ತಾರೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ಯಿ ಹೇಳಿದ್ದಾರೆ. ಶೈಕ್ಷಣಿಕ ಮೂಲಸೌಕರ್ಯ ಅಭಿವೃದ್ದಿಯಾಗದ ಪ್ರದೇಶಗಳಲ್ಲಿ ಪ್ರಧಾಮಂತ್ರಿ ‘ಜನ ವಿಕಾಸ್ ಕಾರ್ಯಕ್ರಮ’ ಅಡಿ ಗುರುಕುಲ ಮತ್ತು ಸಾಮಾನ್ಯ ಸೇವಾ ಕೇಂದ್ರಗಳ ಮಾದರಿಯಲ್ಲಿ ಶಾಲೆಗಳು, ಕಾಲೇಜುಗಳು, ಐಟಿಐಗಳು, ಪಾಲಿಟೆಕ್ನಿಕ್, ವಿದ್ಯಾರ್ಥಿನಿಯರ ವಸತಿನಿಲಯಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ಮೌಲಾನಾ ಆಜಾದ್ ಶಿಕ್ಷಣ ಪ್ರತಿಷ್ಠಾನದ 65 ನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಿಡ್ಜ್ ಕೋರ್ಸ್ ಗಳನ್ನು ಒದಗಿಸುವುದರ ಮೂಲಕ ಶಾಲೆ ತೊರೆದ ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿನಿಯರನ್ನು ಶಿಕ್ಷಣ ಮತ್ತು ಉದ್ಯೋಗಕ್ಕೆ ಜೋಡಿಸಲಾಗುವುದು ಎಂದು ಹೇಳಿದ್ದಾರೆ.

Leave a Reply