ನವದೆಹಲಿ : ಕೇಂದ್ರ ಸರಕಾರ ಪೆಟ್ರೋಲ್ ಡಿಸೇಲ್ ಹಾಗೂ ಅಡುಗೆ ಅನಿಲಗಳ ಬೆಲೆಯನ್ನು ಮನಬಂದಂತೆ ಏರಿಸುವುದರ ವಿರುದ್ಧ ಸೆ.10 ರಂದು ಭಾರತ್ ಬಂದ್ ಆಚರಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಹ್ಮದ್ ಪಟೇಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದು ಕೊಳ್ಳಲಾಗಿದ್ದು, ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಡಿಸೇಲ್ ಹಾಗೂ ಅಡುಗೆ ಅನಿಲಗಳ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಕೋಟ್ಯಂತರ ವಾಹನ ಸವಾರರು ಪರದಾಡುವಂತಾಗಿದೆ. ಈ ಬೆಲೆ ಏರಿಕೆ ನಾಟಕದಲ್ಲಿ 11 ಲಕ್ಷ ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ. ಅದನ್ನು ಜನರಿಗೆ ಮನವರಿಕೆ ಮಾಡಲು ಈ ಬಂದ್ ಆಚರಿಸಲು ಉದ್ದೇಶಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ರಣದೀಪ್ ಸುರ್ಜಿವಾಳ ತಿಳಿಸಿದ್ದಾರೆ.

ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ಬೆಂಬಲ ಸಿಗಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗೂಂಡೂರಾವ್ ಆಶಾ ಭಾವನೆ ವ್ಯಕ್ತ ಪಡಿಸಿದ್ದಾರೆ.

Leave a Reply