ನವದೆಹಲಿ: ದಲಿತರು, ಬುಡಕಟ್ಟು ಜನಾಂಗದವರು ಮತ್ತು ಮುಸ್ಲಿಮರನ್ನು ಅನೇಕರು ಮನುಷ್ಯರೆಂದು ಪರಿಗಣಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಹತ್ರಾಸ್ ಘಟನೆಯ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ಯಾರೂ ಅತ್ಯಾಚಾರಕ್ಕೆ ಒಳಗಾಗಿಲ್ಲ ಎಂದು ಮುಖ್ಯಮಂತ್ರಿ ಮತ್ತು ಪೊಲೀಸರು ಹೇಳಿದ್ದಾರೆ. ಯಾಕೆಂದರೆ ಆಕೆ ಅವರ ಯಾರೂ ಅಲ್ಲ. ಒಂದೊಂದು ನಾಚಿಕೆಗೇಡಿನ ಸತ್ಯ ಎಂದು ರಾಹುಲ್ ಬರೆದಿದ್ದಾರೆ. ಹತ್ರಾಸ್ ಘಟನೆ ಕುರಿತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯುಪಿ ಪೊಲೀಸರ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

ಹತ್ರಾಸ್ ಘಟನೆ ಕುರಿತು ಬಿಬಿಸಿ ಪ್ರಕಟಿಸಿರುವ ಲೇಖನವನ್ನು ರಾಹುಲ್ ಗಾಂಧಿ ಶೇರ್ ಮಾಡಿದ್ದು, 19 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಲಿಲ್ಲ ಎಂದು ಸಾಬೀತುಪಡಿಸಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳು ಏಕೆ ಪ್ರಯತ್ನಿಸುತ್ತಿದ್ದಾರೆ ಎಂದು ಬಿಬಿಸಿ ವರದಿ ಕೇಳಿದೆ. ಸಾಕ್ಷ್ಯವು ಸಂತ್ರಸ್ಥೆಯನ್ನು ಬೆಂಬಲಿಸುತ್ತಿದೆ. ಆದರೆ ಅಧಿಕಾರಿಗಳು ಯಾಕೆ ಅತ್ಯಾಚಾರ ನಡೆದಿಲ್ಲ ಎಂದು ಒತ್ತಾಯಿಸುತ್ತಿದ್ದಾರೆ ಎಂದು ಬಿಬಿಸಿ ವರದಿ ಕೇಳಿದೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲು ಸಿಬಿಐಗೆ ಅಧಿಸೂಚನೆ ಹೊರಡಿಸಲಾಗಿದ್ದು, ಸೆಪ್ಟೆಂಬರ್ 29 ರಂದು ದೆಹಲಿ ಆಸ್ಪತ್ರೆಯಲ್ಲಿ 19 ವರ್ಷದ ದಲಿತ ಯುವತಿಯೊಬ್ಬಳು ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಳು.

Leave a Reply