ದೆಹಲಿ ಹಿಂಸಾಚಾರದಲ್ಲಿ ಇಪ್ಪತ್ತು ಮಂದಿ ಸಾವನ್ನಪ್ಪಿದ್ದು, ಇದಕ್ಕಾಗಿ ಬಿಜೆಪಿ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಇಂದು ಒತ್ತಾಯಿಸಿದೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಪತ್ರಿಕಾಗೋಷ್ಠಿಯಲ್ಲಿ, ಬಿಜೆಪಿ ದೆಹಲಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದು, ದೆಹಲಿಯಲ್ಲಿ ಈ ರೀತಿ ಪರಿಸ್ಥಿತಿ ಹದಗೆಡುತ್ತಿರುವಾಗ ಸೇನೆಯನ್ನು ಯಾಕೆ ಕರೆಯಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಸೋನಿಯಾ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ದೆಹಲಿಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನನಗೆ ಗಂಭೀರ ಚಿಂತೆ ಇದೆ. ಈ ಘಟನೆಯ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದ್ದು, ಬಿಜೆಪಿ ನಾಯಕರ ಪ್ರಚೋದನಕಾರಿ ಭಾಷಣ ಮಾಡಿ ಭಯ ಮತ್ತು ದ್ವೇಷದ ವಾತಾವರಣ ಸೃಷ್ಟಿಸಿದ್ದಾರೆ ಎಂದವರು ಹೇಳಿದರು.

ದೆಹಲಿ ಸರಕಾರ ಮತ್ತು ಕೇಂದ್ರ ಸರಕಾರ ಯಾವುದೇ ಸರಿಯಾದ ಕ್ರಮ ಕೈಗೊಳ್ಳದ ಕಾರಣ 20 ಕ್ಕಿಂತಲೂ ಅಧಿಕ ಜೀವ ಬಲಿಯಾಗಿದೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಸಮಿತಿ ಎಲ್ಲಾ ಸಂತ್ರಸ್ತರ ಜೊತೆಗಿದೆ ಮತ್ತು ಮೃತರ ಕುಟುಂಬಕ್ಕೆ ಸಾಂತ್ವನ ನೀಡುತ್ತದೆ. ಇಂದಿನ ದೆಹಲಿಯ ಪರಿಸ್ಥಿತಿಗೆ ಗೃಹ ಮಂತ್ರಿ ಅಮಿತ್ ಶಾಹ್ ಜವಾಬ್ದಾರರಾಗಿದ್ದಾರೆ. ಆದ್ದರಿಂದ ಅವರು ರಾಜೀನಾಮೆ ನೀಡಬೇಕು. ಮಾತ್ರವಲ್ಲ ದೆಹಲಿ ಸರಕಾರವೂ ತನ್ನ ಕರ್ತವ್ಯ ನಿರ್ವಹಿಸುವಲ್ಲಿ ವಿಫಲ ಆಗಿದೆ. ಭಾನುವಾರದಿಂದ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿ ಸೋನಿಯಾ ಗಾಂಧಿ ಈ ಪ್ರಶ್ನೆಯನ್ನು ಎತ್ತಿದ್ದಾರೆ.

LEAVE A REPLY

Please enter your comment!
Please enter your name here