ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ(ಎಸ್‍ಪಿಬಿ ಎಂದೇ ಪ್ರಸಿದ್ಧರು) (4ನೇ ಜೂನ್, 1946 – 25ನೇ ಸೆಪ್ಟೆಂಬರ್ 2020) ಭಾರತದ ಖ್ಯಾತ ಹಿನ್ನೆಲೆ ಗಾಯಕರು. ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡಿದ್ದಾರೆ.

ದೂರದರ್ಶನದಲ್ಲಿ ಒಂದು ದಶಕದಿಂದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವಂತೆ, ಇತರ ಭಾಷೆಗಳಲ್ಲೂ ಅಂತದೇ ಕಾರ್ಯಕ್ರಮಗಳನ್ನು ಬಾಲು ನಡೆಸಿದರು. ಅವರು ಪುಟ್ಟ ಮಕ್ಕಳಿಂದ ಹಿಡಿದು ಸಂಗೀತದ ದಿಗ್ಗಜಗಳವರೆಗೆ ಹಿರಿಯರು ಕಿರಿಯರು ಎಲ್ಲರನ್ನೂ ಗೌರವಪೂರ್ಣವಾಗಿ ನಡೆಸಿಕೊಳ್ಳುವುದನ್ನು ಕಾಣುವುದೇ ಒಂದು ಚೆಂದ ಎಂಬುದು ಅವರ ಅಭಿಮಾನಿ ವೀಕ್ಷಕರುಗಳಗಳ ನುಡಿ.

ಎಸ್ ಪಿ ಬಿ ಅವರು ಉಸಿರಾಟ ತೊಂದರೆಯಿಂದ ಚಿಕಿತ್ಸೆ ಫಲಿಸದೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ 25 ಸೆಪ್ಟೆಂಬರ್ 2020 ರಂದು ಮರಣ ಹೊಂದಿದರು.
ಕೊರೊನಾ ವೈರಾಣು ದಾಳಿಗೆ ತುತ್ತಾಗಿದ್ದ ಅವರ ಆರೋಗ್ಯ, ಕೆಲದಿನಗಳಿಂದ ತೀವ್ರವಾಗಿ ಹದಗೆಟ್ಟಿತ್ತು. ವೈರಾಣು ದಾಳಿಯಿಂದಾಗಿ ಅವರ ಶ್ವಾಸಕೋಶಕ್ಕೆ ಗಂಭೀರವಾದ ಹಾನಿಯಾಗಿತ್ತು. ಇದರಿಂದಾಗಿ ಉಸಿರಾಟಕ್ಕೆ ತೊಂದರೆಯಾಗಿತ್ತು. ಈ ಕಾರಣದಿಂದಾಗಿ ಅವರಿಗೆ ಹೆಚ್ಚುವರಿ ಆಮ್ಲಜನಕವನ್ನು ಪೂರೈಸಲು ಇಸಿಎಮ್‍ಓ ಸಾಧನವನ್ನು ಅಳವಡಿಸಿ, ಚೆನ್ನೈನಲ್ಲಿರುವ ಎಮ್‍ಜಿಎಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಬಾಲಸುಬ್ರಹ್ಮಣ್ಯಂ ಎಸ್‍ಪಿ ರವರ ನೀವು ಬಹುಶಃ ನೋಡಿರದ ಸುಂದರ ಕೆಲವು ಫೋಟೋ ಇಲ್ಲಿದೆ ಮಿಸ್ ಮಾಡದಿರಿ

Leave a Reply